ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್  
ನ್ಯೂಸ್

ರಾಷ್ಟ್ರೀಯ ಸಂಕಲ್ಪಕ್ಕೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ: ಎ.ಎಸ್.ಕಿರಣ್ ಕುಮಾರ್ ಕರೆ - Students should contribute

ತಂತ್ರಜ್ಞಾನದಲ್ಲಿನ ನಿರಂತರ ಬದಲಾವಣೆಗಳಿಗೆ ವಿದ್ಯಾರ್ಥಿಗಳು ಹೊಂದಿಕೊಳ್ಳುವುದರ ಜತೆಗೆ ಹೊಸ ಜ್ಞಾನ, ಕೌಶಲ ಕಲಿಯಬೇಕು. ಪಠ್ಯಪುಸ್ತಕಗಳ ಜ್ಞಾನಕ್ಕೆ ಸೀಮಿತವಾಗದೆ, ನಾವೀನ್ಯತೆ, ಪ್ರಾಯೋಗಿಕ ಜ್ಞಾನ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ, ಬದಲಾವಣೆಗಳಿಗೆ ಹೊಂದಿಕೊಳ್ಳುವ ಗುಣ ಹಾಗೂ ಕಲಿಕೆ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಬೆಂಗಳೂರು: (Students should contribute) ವಿದ್ಯಾರ್ಥಿಗಳು ಜ್ಞಾನ, ಸಾಮರ್ಥ್ಯ ಮತ್ತು ತಾಂತ್ರಿಕ ಕೌಶಲಗಳನ್ನು ನಿರಂತರವಾಗಿ ವೃದ್ಧಿಸಿಕೊಳ್ಳುವ ಮೂಲಕ 2047ರ ವೇಳೆಗೆ ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿ ರೂಪಿಸುವ ರಾಷ್ಟ್ರೀಯ ಸಂಕಲ್ಪಕ್ಕೆ ಮಹತ್ವದ ಕೊಡುಗೆ ನೀಡಬೇಕು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮಾಜಿ ಅಧ್ಯಕ್ಷ ಮತ್ತು ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎ.ಎಸ್.ಕಿರಣ್ ಕುಮಾರ್ ಕರೆ ನೀಡಿದ್ದಾರೆ.

ನ್ಯಾಷನಲ್ ಎಜುಕೇಶನ್ ಸೊಸೈಟಿ ಆಫ್ ಕರ್ನಾಟಕ, ಭಾನುವಾರ ಜಯನಗರದಲ್ಲಿ ಆಯೋಜಿಸಿದ್ದ ‘ನವೋದಯ 2026-27’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದಿನ ತಂತ್ರಜ್ಞಾನ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆಯ(ಎಐ) ಮಹತ್ವ ವೇಗವಾಗಿ ಹೆಚ್ಚುತ್ತಿದೆ. ತಂತ್ರಜ್ಞಾನದಲ್ಲಿನ ನಿರಂತರ ಬದಲಾವಣೆಗಳಿಗೆ ವಿದ್ಯಾರ್ಥಿಗಳು ಹೊಂದಿಕೊಳ್ಳುವುದರ ಜತೆಗೆ ಹೊಸ ಜ್ಞಾನ, ಕೌಶಲ ಕಲಿಯಬೇಕು. ಪಠ್ಯಪುಸ್ತಕಗಳ ಜ್ಞಾನಕ್ಕೆ ಸೀಮಿತವಾಗದೆ, ನಾವೀನ್ಯತೆ, ಪ್ರಾಯೋಗಿಕ ಜ್ಞಾನ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ, ಬದಲಾವಣೆಗಳಿಗೆ ಹೊಂದಿಕೊಳ್ಳುವ ಗುಣ ಹಾಗೂ ಕಲಿಕೆ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಭಾರತೀಯ ಸಶಸ್ತ್ರ ಪಡೆಗಳ ನಾಗರಿಕ ಪದಕ ಪುರಸ್ಕೃತ ಡಾ. ಪಿ.ಬಿ. ಕೋಟೂರ್, ನಿರಂತರ ಕಲಿಕೆ, ಶಿಸ್ತು, ವೈಯಕ್ತಿಕ ಬೆಳವಣಿಗೆ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನದ ಕುರಿತು ಮಾತನಾಡಿದರು.

ನ್ಯಾಷನಲ್ ಎಜುಕೇಶನ್ ಸೊಸೈಟಿ ಆಫ್​​ ಕರ್ನಾಟಕದ ಗೌರವಾಧ್ಯಕ್ಷ ಡಾ.ಎಚ್.ಎನ್. ಸುಬ್ರಹ್ಮಣ್ಯ, ಎನ್‌ಇಎಸ್ ಕರ್ನಾಟಕದ ಗೌರವ ಕಾರ್ಯದರ್ಶಿ ಎರ್.ವಿ.ವೆಂಕಟಶಿವರೆಡ್ಡಿ, ಕಾರ್ಯದರ್ಶಿ ಎರ್. ಬಿ.ಎಸ್. ಅರುಣ್ ಕುಮಾರ್ ಸೇರಿ ಮತ್ತಿತರರಿದ್ದರು.