ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಸಾದ್ ಉಪನ್ಯಾಸ ನೀಡಿದರು. 
ನ್ಯೂಸ್

ವಿದ್ಯಾರ್ಥಿಗಳು ಪುಸ್ತಕದ ಹುಳುಗಳಾಗದಿರಲಿ

ಅಭಿನಯ್ ಎಚ್.ಎಂ

ಸುತ್ತೂರು: ಭಾಷೆ ಮೇಲಿನ ಪ್ರಬುದ್ಧತೆ ಮತ್ತು ಉತ್ತಮ ಭಾಷಾ ಪ್ರಯೋಗ ವ್ಯಕ್ತಿಯನ್ನು ಜೀವನದಲ್ಲಿ ಉತ್ತುಂಗಕ್ಕೆ ಕೊಂಡೊಯ್ಯಲಿದೆ ಎಂದು ಮೈಸೂರಿನ ಕೆರಿಯರ್ ಸ್ಪಾರ್ಕ್ ಎಜುಕೇಷನ್ ಸಲ್ಯೂಶನ್ಸ್ ಮತ್ತು ಟೆಕ್ನಾಲಜೀಸ್ ಸಂಸ್ಥಾಪಕ ಪ್ರಸಾದ್ ಹೇಳಿದರು.

ಇಲ್ಲಿನ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂವಹನದ ಮಹತ್ವ ಮತ್ತು ವೃತ್ತಿ ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ವಿದ್ಯಾರ್ಥಿಗಳು ಪುಸ್ತಕದ ಹುಳುಗಳಾಗುವ ಬದಲು ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ರಸಪ್ರಶ್ನೆ ಮೂಲಕ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನವನ್ನು ಪರೀಕ್ಷಿಸಿದರು. ಸರಿ ಉತ್ತರ ನೀಡಿದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಿದರು. ಕಾಲೇಜು ಪ್ರಾಂಶುಪಾಲರಾದ ಡಾ.ಎಚ್.ಎಂ.ಮಹೇಶ್, ಸಹಾಯಕ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.