ಕೊಪ್ಪ ಹೋಬಳಿಯ ಬಿದರಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗುರುವಾರ ತಮ್ಮ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಬಿದರಕೋಟೆ ಕುಶ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಪಠ್ಯ ಪರಿಕರಗಳನ್ನು ವಿತರಿಸಿದರು. ತಿಮ್ಮೇಶ್, ಶಿವಲಿಂಗಯ್ಯ, ಮಮತಾ ಕುಶ, ನಿರಂಜನ್ ಇದ್ದರು. 
ನ್ಯೂಸ್

ಕಟ್ಟಪಟ್ಟು ಓದಿ ಪಾಲಕರಿಗೆ ಕೀರ್ತಿ ತನ್ನಿ

ಮದ್ದೂರು: ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಟ್ಟು ವ್ಯಾಸಂಗ ಮಾಡಿ ಉನ್ನತ ಸಾಧನೆ ಮಾಡುವ ಮೂಲಕ ಪಾಲಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರಬೇಕೆಂದು ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಬಿದರಕೋಟೆ ಕುಶ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲೂಕಿನ ಕೊಪ್ಪ ಹೋಬಳಿಯ ಬಿದರಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗುರುವಾರ ತಮ್ಮ ಹುಟ್ಟುಹಬ್ಬದ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಪಠ್ಯ ಪರಿಕರಗಳನ್ನು ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸಂಘ-ಸಂಸ್ಥೆಗಳು ನೀಡುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ವಿದ್ಯೆ ಯಾರು ಕದಿಯಲಾಗದು ಹಾಗೂ ಪ್ರಪಂಚದಲ್ಲಿ ವಿದ್ಯೆಗೆ ಸರಿಸಾಟಿಯಾಯದದ್ದು ಯಾವುದು ಇಲ್ಲ. ಇದನ್ನರಿತು ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲಿ ಕಷ್ಟಪಟ್ಟು ಓದುವ ಮೂಲಕ ಉನ್ನತ ಸ್ಥಾನಮಾನವನ್ನ ಗಳಿಸಿ ಸಮಾಜದ ಕಟ್ಟಡ ಕಡೆಯ ವ್ಯಕ್ತಿಗಳಿಗೆ ಸಹಾಯಹಸ್ತ ಚಾಚಬೇಕೆಂದು ತಿಳಿಸಿದರು.

ಮುಖ್ಯಶಿಕ್ಷಕ ತಿಮ್ಮೇಶ್, ಎಂಪಿಸಿಎಸ್ ಮಾಜಿ ಅಧ್ಯಕ್ಷ ಶಿವಲಿಂಗಯ್ಯ, ಗ್ರಾಪಂ ಉಪಾಧ್ಯಕ್ಷೆ ಮಮತಾ ಕುಶ, ಮುಖಂಡರಾದ ಸಂತೋಷ್, ನಿರಂಜನ್, ಮೂರ್ತಿ ಹಾಗೂ ತಿಮ್ಮಪ್ಪಾಜಿ ಇದ್ದರು.