ನ್ಯೂಸ್

2027ರ ಅಂತ್ಯಕ್ಕೆ ಉಪನಗರ ರೈಲು ಸಂಚಾರ; ಒಡಂಬಡಿಕೆಗೆ ಅಂಕಿತ

ಬೆಂಗಳೂರು: ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್​ಡಬ್ಲು್ಯ ಡೆವಲಪ್​ವೆುಂಟ್ ಬ್ಯಾಂಕ್ ರಾಜ್ಯ ಸರ್ಕಾರದ ಕೆ-ರೈಡ್ ಸಂಸ್ಥೆಗೆ 4,561 ಕೋಟಿ (500 ದಶಲಕ್ಷ ಯೂರೋ) ಸಾಲ ನೀಡುತ್ತಿದ್ದು, ಈ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

ಕೆ-ರೈಡ್ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯೂ ಆದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಮತ್ತು ಕೆಎಫ್​ಡಬ್ಲು್ಯ ಪರವಾಗಿ ಭಾರತದಲ್ಲಿ ಸಂಸ್ಥೆಯ ನಿರ್ದೇಶಕ ವೂಲ್ಪ್ ಮೌತ್ ಸಹಿ ಹಾಕಿದರು.

ಯೋಜನೆಗೆ ಕೆಎಫ್​ಡಬ್ಲು್ಯ ಶೇ.4ರ ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಗೆ ಈ ಸಾಲವನ್ನು ನೀಡುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ ಮಾಹಿತಿ ನೀಡಿದರು. ಈ ಹಣವನ್ನು ಕೆಂಗೇರಿ-ವೈಟ್​ಫೀಲ್ಡ್ ನಡುವಿನ ಕಾರಿಡಾರ್-3ರ ವ್ಯಾಪ್ತಿಯ ಸ್ಟೇಷನ್ ವರ್ಕ್, ವಯಾಡಕ್ಟ್, ಹೀಳಲಿಗೆ-ರಾಜಾನುಕುಂಟೆ ನಡುವಿನ ಕಾರಿಡಾರ್-4ರ ವ್ಯಾಪ್ತಿಯಲ್ಲಿ ಬರುವ ದೇವನಹಳ್ಳಿಯಲ್ಲಿನ ಡಿಪೋ-1, ಸಿಗ್ನಲ್ ಮತ್ತು ಟೆಲಿಕಾಂ, ಪ್ಲಾಟ್​ಫಾರಂ ಸ್ಕ್ರೀನ್ ಡೋರ್, ಸ್ವಯಂಚಾಲಿತ ಪ್ರಯಾಣ ದರ ವಸೂಲಿ ವ್ಯವಸ್ಥೆ, ಸೌರ ಫಲಕ, ಭದ್ರತಾ ಸಾಧನಗಳು ಮತ್ತು ಎಂಎಐ (ಮ್ಯಾನ್ ಮಷಿನ್ ಇಂಟರ್ಫೆಸ್) ಕಾಮಗಾರಿಗಳಿಗೆ ಬಳಸಿಕೊಳ್ಳಲಾಗುವುದು ಎಂದು ವಿವರಿಸಿದರು.

ಬೆಂಗಳೂರಿನ ಬ್ರ್ಯಾಂಡ್ ಮೌಲ್ಯ: ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರಾ್ಯಂಡ್ ಮೌಲ್ಯವಿದೆ. ಜತೆಗೆ, ನಗರಗಳಲ್ಲಿ ಸುಗಮ ಸಂಚಾರ ಜಾಲವನ್ನು ಅಭಿವೃದ್ಧಿಪಡಿಸುವುದು ಸರ್ಕಾರದ ಗುರಿಯಾಗಿದೆ. ಇದಕ್ಕೆ ತಕ್ಕಂತೆ ಸಬರ್ಬನ್ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಪೂರೈಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ.ಈ ಯೋಜನೆಯು ರಾಜಧಾನಿಯ ಸ್ವರೂಪವನ್ನೇ ಆಮೂಲಾಗ್ರವಾಗಿ ಬದಲಿಸಲಿದೆ ಎಂದು ಪಾಟೀಲ್ ಹೇಳಿದರು.

ಯೋಜನೆಗೆ ಶೇ.60 ಸಾಲ: ಬೆಂಗಳೂರಿನ ಜನರ ಜೀವನವನ್ನು ಸುಗಮಗೊಳಿಸುವುದು ಸಬರ್ಬನ್ ರೈಲು ಯೋಜನೆಯ ಉದ್ದೇಶವಾಗಿದೆ. ಒಟ್ಟು 15,767 ಕೋಟಿ ರೂ. ವೆಚ್ಚದ ಈ ಯೋಜನೆಯು 58 ನಿಲ್ದಾಣಗಳನ್ನು ಹೊಂದಿರಲಿದ್ದು, ಒಟ್ಟು 4 ಕಾರಿಡಾರ್​ಗಳಲ್ಲಿ 148 ಕಿ.ಮೀ. ಇರಲಿದೆ. ಈ ಯೋಜನೆಗೆ ರೈಲ್ವೆ ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳು ತಲಾ ಶೇ.20ರಷ್ಟು ಹೂಡಿಕೆ ಮಾಡಲಿದ್ದು, ಬಾಹ್ಯ ಸಾಲದ ರೂಪದಲ್ಲಿ ಶೇ.60ರಷ್ಟು ಸಂಪನ್ಮೂಲ ಕ್ರೋಡೀಕರಣ ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆ ಮತ್ತು ಕೆಎಫ್​ಡಬ್ಲು್ಯ ನಡುವೆ ಈ ಸಂಬಂಧ 2023ರ ಡಿ.15ರಂದು ಪ್ರಾಥಮಿಕ ಒಪ್ಪಂದವಾಗಿತ್ತು. ಈಗ ಕೆಎಫ್​ಡಬ್ಲು್ಯ ಮತ್ತು ಯೋಜನೆ ಅನುಷ್ಠಾನದ ಹೊಣೆ ಹೊತ್ತಿರುವ ಕೆ-ರೈಡ್ ನಡುವೆ ಪೂರಕ ಒಪ್ಪಂದ ಮಾಡಿಕೊಳ್ಳಲಾಗಿದೆ. ಯೋಜನೆಯ ಎಲ್ಲ ನಾಲ್ಕೂ ಕಾರಿಡಾರ್​ಗಳ ಕಾಮಗಾರಿಗಳು 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು ಇದು ಮಹತ್ವದ ಒಪ್ಪಂದ ಎನಿಸಿದೆ.

| ಎಂ.ಬಿ. ಪಾಟೀಲ ಕೈಗಾರಿಕಾ ಸಚಿವ