terror attack| ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತಂತೆ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿದ್ದಾರೆ. ಈಗಾಗಲೇ ಈ ದಾಳಿ ಬಗ್ಗೆ ಚಿತ್ರರಂಗದ ಗಣ್ಯರು, ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಇದೀಗ ನಟ ಕಿಚ್ಚ ಸುದೀಪ್ ಅವರು ಕೂಡಾ ಟ್ವೀಟ್ ಮಾಡುವ ಮೂಲಕ ಪರಿಸ್ಥಿತಿಯನ್ನು ಸರಿದೂಗಿಸುವಂತೆ ಮನವಿ ಮಾಡಿದ್ದಾರೆ.
ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿ. ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡಬೇಕಾದ ಸಮಯ ಎಂದಿದ್ದಾರೆ.
ಇದನ್ನೂ ಓದಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರ ದಾಳಿ; ಸರ್ಕಾರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ| terror attack
ಈ ಹೇಡಿತನದ ಹಿಂದಿರುವವರನ್ನು ತ್ವರಿತವಾಗಿ ಮತ್ತು ದೃಢವಾಗಿ ನ್ಯಾಯದ ಮುಂದೆ ತರಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಸುದೀಪ್ ಕೈ ಮುಗಿದ ಎಮೋಜಿಗಳ ಜೊತೆ ಮನವಿ ಮಾಡಿಕೊಂಡಿದ್ದಾರೆ. ಹಾಗೂ ಈ ಟ್ವೀಟ್ನಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವರನ್ನು ಮತ್ತು ರಾಜನಾಥ್ ಸಿಂಗ್ ಅವರನ್ನು ಟ್ಯಾಗ್ ಮಾಡಿದ್ದಾರೆ.
(ಏಜೆನ್ಸೀಸ್)