ನ್ಯೂಸ್

ರೇವಣ್ಣ ದಂಪತಿ ಸೇರಿ 9 ಆರೋಪಿಗಳಿಗೆ ಸಮನ್ಸ್ ಜಾರಿ

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯವು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಪತ್ನಿ ಭವಾನಿ ಸೇರಿದಂತೆ 9 ಆರೋಪಿಗಳಿಗೆ ಆ.೨೮ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಪ್ರಕರಣದಲ್ಲಿ ಬಂಧಿತರಾಗಿರುವ ಸತೀಶ್‌ಬಾಬು, ಮನುಗೌಡ, ಕೆ.ಎ.ರಾಜಗೋಪಾಲ್, ಎಚ್.ಕೆ.ಸುಜಯ್, ಎಚ್.ಎನ್.ಮಧು, ಎಸ್.ಟಿ.ಕೀರ್ತಿ ಮತ್ತು ಅಜಿತ್ ಕುಮಾರ್‌ಗೆ ಐಪಿಸಿ ಸೆಕ್ಷನ್ ೩೬೪ ಎ ಕೈಬಿಟ್ಟು ಉಳಿದ ಆರೋಪಗಳಿಗೆ ಸಮನ್ಸ್ ನೀಡಲಾಗಿದೆ.