ನವದೆಹಲಿ: 'ಆಪರೇಷನ್ ಸಿಂಧೂರ್'ಗೆ ಸಂಬಂಧಿಸಿ ಮಾಡಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ಗಾಗಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮುದಾಬಾದ್ ಅವರಿಗೆ ಜಾಮೀನು ಮಂಜೂರು ಮಾಡುವಾಗ ವಿಧಿಸಲಾಗಿದ್ದ ಷರತ್ತುಗಳನ್ನು ಸುಪ್ರೀಂ ಕೋರ್ಟ್ ಸಡಿಲಗೊಳಿಸಿದೆ.
ಇದನ್ನೂ ಓದಿ: 'ಸೇನೆಗೆ ಮತ್ತಷ್ಟು ಶಕ್ತಿ'; ಮುಂದಿನ ವಾರ ಭಾರತಕ್ಕೆ ಬರಲಿವೆ ಮೂರು ಅಪಾಚೆ ಹೆಲಿಕಾಪ್ಟರ್ಗಳು| apache helicopters
ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಪ್ರಾಧ್ಯಾಪಕರ ವಿರುದ್ಧ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ತನಿಖೆಯ ವ್ಯಾಪ್ತಿಯು ಸೀಮಿತವಾಗಿದೆ ಎಂದು ಒತ್ತಿ ಹೇಳಿತು ಮತ್ತು ಅವರು ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ಕುರಿತು ಮಹ್ಮುದಾಬಾದ್ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸುವುದು ನ್ಯಾಯಾಂಗ ನಿಂದನೆಯಾಗುತ್ತದೆಯಾದರೂ, ಉಳಿದಂತೆ ಬೇರೆ ಯಾವುದೇ ವಿಷಯದ ಬಗ್ಗೆ ಬರೆಯಲು ಸ್ವತಂತ್ರರು ಎಂದು ಹೇಳಿದರು.
ಅವರು ಉಳಿದ ವಿಷಯಗಳ ಕುರಿತು ಲೇಖನಗಳನ್ನು ಬರೆಯಲು ಹಾಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸ್ವತಂತ್ರರು ಎಂದು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
(ಏಜೆನ್ಸೀಸ್)
ಹರಿಯಾಣದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯೋಗೇಶ್ ಜಥೇರಿ ಅವರು ಸಲ್ಲಿಸಿದ ದೂರಿನ ಮೇರೆಗೆ ಮೇ 18 ರಂದು 42 ವರ್ಷದ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಬಂಧಿಸಲಾಯಿತು. ಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳನ್ನು ಪ್ರಚೋದಿಸುವುದು ಮತ್ತು ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಮಹ್ಮದಾಬಾದ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ ಅವರ ವಿರುದ್ಧ ದೇಶದ್ರೋಹದಂತಹ ಆರೋಪಗಳನ್ನು ದಾಖಲಿಸಲಾಗಿದೆ. ಆದಾಗ್ಯೂ ಮೇ 21 ರಂದು, ಸುಪ್ರೀಂ ಕೋರ್ಟ್ ತನಿಖೆಗೆ ತಡೆ ನೀಡಲು ನಿರಾಕರಿಸಿ ಅವರಿಗೆ ಜಾಮೀನು ನೀಡಿತು.