ನ್ಯೂಸ್

ಸಂತ್ರಸ್ತೆ ಕಿಡ್ನ್ಯಾಪ್​ ಕೇಸ್​; ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್​

ನವದೆಹಲಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​​ ಕೇಸ್​ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​ ಜಾರಿ ಮಾಡಿದೆ.

ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ನೀಡಿರುವ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ನೋಟಿಸ್​ ಜಾರಿ ಮಾಡಿದೆ.

ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್​ ಮತ್ತು ಉಜ್ಜಲ್​ ಭುಯಾನ್​ ಅವರಿದ್ದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತ್ತು. ಎಸ್‌ಐಟಿ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿದರು. ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಜೆಡಿಎಸ್​ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಎಸ್‌ಐಟಿ ವಕೀಲ ವಿಎನ್ ರಘುಪತಿ ಮೂಲಕ ಅರ್ಜಿ ಸಲ್ಲಿಸಿದೆ. ಮೈಸೂರು ಮತ್ತು ಹಾಸನ ಪ್ರವೇಶಿಸುವಂತಿಲ್ಲ ಎಂಬ ಷರತ್ತಿನ ಮೇಲೆ ಹೈಕೋರ್ಟ್​ ಭವಾನಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.