ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಂಗದ ಕುರಿತು ಟೀಕೆ ಮಾಡಿ ಪೋಸ್ಟ್ ಮಾಡಿದ್ಧಾರೆ ಎಂಬ ಆರೋಪದ ಮೇಲೆ ಸುಪ್ರೀಂ ಕೋರ್ಟ್ ಐಪಿಎಲ್ನ ಮಾಜಿ ಅಧ್ಯಕ್ಷ ಲಲಿತ್ ಮೋದಿಗೆ ಛೀಮಾರಿ ಹಾಕಿದೆ.
ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡಿರುವ ಕುರಿತು ಬೇಷರತ್ ಕ್ಷಮೆಯಾಚಿಸುವಂತೆ ಲಲಿತ್ ಮೋದಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಲಲಿತ್ ಮೋದಿ ಸಲ್ಲಿಸಿದ್ದ ಕೌಂಟರ್ ಅಫಿಡೆವಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್.ಷಾ, ಸಿ.ಟಿ.ರವಿಕುಮಾರ್ ಅವರಿದ್ದ ದ್ವಿಸದಸ್ಯ ಪೀಠವು ಅವರೇನು ಕಾನೂನಿಗಿಂತ ದೊಡ್ಡವರಲ್ಲ ಎಂದು ಚಾಟಿ ಬೀಸಿದೆ.
ಇದನ್ನೂ ಓದಿ: VIDEO| ದೇಶದಲ್ಲೇ ಮೊದಲ ಅಂಡರ್ ವಾಟರ್ ಮೆಟ್ರೋ ಸಂಚಾರ
ಸಾಮಾಜಿಕ ಜಾಲತಾಣ ಹಾಗೂ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಂಆಡಿರುವ ಟೀಕೆ ಕುರಿತು ಕ್ಷಮೆಯಾಚಿಸುವಂತೆ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ತಿಳಿಸಿದೆ.
ಕ್ಷಮೆಯಾಚಿಸುವ ಮೊದಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಮತ್ತು ಈ ರೀತಿ ಮುಂದಿನ ದಿನಗಳಲ್ಲಿ ಮಾಡುವುದಿಲ್ಲ ಎಂದು ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಳ್ಳಬೇಕು ಎಂದು ಲಲಿತ್ ಮೋದಿಗೆ ನ್ಯಾಯಾಪೀಠ ಸೂಚಿಸಿದೆ.