ವಿಜಯಪುರ: ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ, ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು, ಮುಂದೆಯೂ ನಮ್ಮ ಪರವಾಗಿಯೇ ತೀರ್ಪು ಬರುವ ನಿರೀಕ್ಷೆ ಇದೆ ಎಂದು ಉಡುಪಿಯ ಸರ್ಕಾರಿ ಕಾಲೇಜಿನ ಉಪಾಧ್ಯಕ್ಷ ಯಶಪಾಲ ಸುವರ್ಣ ಪ್ರತಿಕ್ರಿಯಿಸಿದರು.
ದೇಶದ್ರೋಹಿ ಸಂಘಟನೆಗಳು ಹೈಕೋರ್ಟ್ನ ತೀರ್ಪು ಧಿಕ್ಕರಿಸಿ ಸುಪ್ರೀಂ ಕೋರ್ಟ್ಗೆ ಹೋದರು. ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಪ್ರಕರಣ ವರ್ಗಾಯಿಸಿದ್ದು ಇದೀಗ ಆ ಪೀಠದ ತೀರ್ಪಿಗೆ ಬದ್ಧರಾಗಿರುತ್ತೇವೆ. ಮುಂದೆಯೂ ನಮ್ಮ ಪರವಾಗಿ ತೀರ್ಪು ಬರುವ ವಿಶ್ವಾಸ ಇದೆ ಎಂದು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಆರು ಜನ ವಿದ್ಯಾರ್ಥಿನಿಯರು ದ್ರೇಶದ್ರೋಹಿ ಸಂಘಟನೆಗಳಾದ ಪಿಎಫ್ಐ, ಎಸ್ಡಿಪಿಐ ಮಾತು ಕೇಳಿ ಸುಪ್ರೀಂ ಕೋರ್ಟ್ಗೆ ಹೋದರು. ನಮ್ಮ ಕಾಲೇಜಿಗೆ 30 ಕ್ಕೂ ಅಧಿಕ ಅಲ್ಪ ಸಂಖ್ಯಾತ ಹೆಣ್ಣು ಮಕ್ಕಳು ಪ್ರವೇಶ ಪಡೆದಿದ್ದಾರೆ. ಆದರೆ ಕೆಲವು ಸಂಘಟನೆಗಳು ಆ ಅರು ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುತ್ತಿವೆ. ಇನ್ನುಳಿದ ಮಕ್ಕಳು ಕಳೆದ ವರ್ಷಕ್ಕಿಂತ ಹೆಚ್ಚಿನ ಅಂಕ ಪಡೆದು ದೇಶದ್ರೋಹಿ ಸಂಘಟನೆಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದರು.