ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ: ರೈತನಿಗೆ ಮಾಲ್ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿದಂತೆ ಇತರೆಡೆ ಪ್ರವೇಶಕ್ಕೆ ಶೀಘ್ರ ವಸ್ತ್ರ ಸಂಹಿತೆ ಜಾರಿ: ಡಿಕೆಶಿ
ಅರ್ಜಿದಾರರು ಇದೇ ರೀತಿಯ ತಪ್ಪನ್ನು ಮುಂದೆ ಮಾಡಬಾರದು. ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿ ಮಾಡುವಂತಿಲ್ಲ. ಮುಂದಿನ 6 ತಿಂಗಳು ಅಥವಾ ಚಾರ್ಚ್ಶೀಟ್ ಸಲ್ಲಿಕೆಯಾಗುವವರೆಗೂ ಹಾಜರಾತಿ ಹಾಕಬೇಕು ಎಂದು ಕೋರ್ಟ್ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.