ತುಮಕೂರು: ಗ್ರಾಪಂ ಚುನಾವಣೆ ಮುಗಿದ ಬೆನ್ನಹಿಂದೆಯೇ ಅಧಿಕಾರ ಹಿಡಿಯುವ ಕಸರತ್ತು ಆರಂಭವಾಗಿದೆ. ಮುಂಬರುವ ಜಿಪಂ, ತಾಪಂ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ತಳಪಟ್ಟದಲ್ಲಿ ಸಂಘಟಿಸುವ ಹಿನ್ನೆಲೆಯಲ್ಲಿ ಹಾಲಿ, ಮಾಜಿ ಶಾಸಕರು ಶುರುವಿಟ್ಟುಕೊಂಡಿದ್ದಾರೆ.
ಸಾಕಷ್ಟು ಜಿದ್ದಾಜಿದ್ದಿನಿಂದ ಗ್ರಾಪಂ ಚುನಾವಣೆ ನಡೆಸಿ ಅತೀ ಹೆಚ್ಚು ಸ್ಥಾನಗಳಲ್ಲಿ ತಮ್ಮ ಬೆಂಬಲಿಗರನ್ನು ಗೆಲ್ಲಿಸಿಕೊಳ್ಳಲು ಯಶಸ್ವಿಯಾಗಿರುವ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡ, ಜೆಡಿಎಸ್ ಬೆಂಬಲಿತ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಗ್ರಾಪಂ ಅಧ್ಯಕ್ಷ ಸ್ಥಾನದ ಆಮಿಷ ಒಡ್ಡಿದ್ದಾರೆ ಎನ್ನಲಾದ ಆಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ತುಮಕೂರು ತಾಲೂಕು ಗಂಗೋನಹಳ್ಳಿ ಗ್ರಾಪಂ ವ್ಯಾಪ್ತಿಯ ಕೆಂಬಳಲುಪಾಳ್ಯ ಗ್ರಾಪಂ ನೂತನ ಸದಸ್ಯ ರವಿ ಜತೆ ಸುರೇಶ್‌ಗೌಡ ಮಾತನಾಡಿದ್ದು ಪಕ್ಷಕ್ಕೆ ಬರುವಂತೆ ಆಹ್ವಾನಿಸಿದ್ದು ಜತೆಗಿದ್ದರೆ ಅಧ್ಯಕ್ಷರನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎನ್ನುವ ಆಡಿಯೋ ಈಗ ಹೆಚ್ಚು ಸದ್ದು ಮಾಡುತ್ತಿದೆ.