ನ್ಯೂಸ್

ಶೀಲ ಶಂಕಿಸಿ ಪತ್ನಿಯನ್ನು ಕೊಂದು Suicide ಮಾಡಿಕೊಂಡ ಪತಿ

ತೆಲಂಗಾಣ: ಪತ್ನಿಯನ್ನು ಕೊಂದು ರೈತನೊಬ್ಬ ಆತ್ಮಹತ್ಯೆಗೆ(Suicide) ಶರಣಾದ ಘಟನೆ ಗುರುವಾರ(ನ.14) ತೆಲಂಗಾಣದ ಸಿರ್ಸಿಲ್ಲ ಎಂಬ ಪಟ್ಟಣದಲ್ಲಿ ನಡೆದಿದೆ.

ಸಿರ್ಸಿಲ್ಲಾ ಪಟ್ಟಣದ ಶಾಂತಿನಗರ ನಿವಾಸಿ ಮುದಂ ವೆಂಕಟೇಶಂ (40) ತನ್ನ ಪತ್ನಿ ಬೊಳ್ಳ ವಸಂತ (35) ಅವರನ್ನು ನರ್ಸಿಂಗ್ ಕಾಲೇಜು ಹಿಂಭಾಗದಲ್ಲಿರುವ ತನ್ನ ಗದ್ದೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯನ್ನು ಕೊಂದು ನಂತರ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರಂಭದಲ್ಲಿ ದಂಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಭಾವಿಸಿದ್ದರು. ಸ್ಥಳದಲ್ಲಿಯೇ ರಕ್ತ ಬಿದ್ದಿರುವುದನ್ನು ಗಮನಿಸಿದ ಬಳಿಕ ಕೊಲೆ ಶಂಕೆ ವ್ಯಕ್ತವಾಗಿದೆ.

ಕೊಲೆಗೆ ಕಾರಣ

ಪತ್ನಿಯ ಶೀಲ ಶಂಕಿಸಿದ ವೆಂಕಟೇಶಂ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಕೆಲವರು ಹೇಳಿಕೆ ನೀಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ವಸಂತ ಅವರು ಆಧಾರ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ಆಕೆಯನ್ನು ಕೆಲಸಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದನು. ಆಕೆ ನಿರಾಕರಿಸಿದ ಆಕೆಯನ್ನು ಕೊಂದು ಹಾಕಿದ್ದಾನೆ ಎಂದು ಸ್ಥಳೀಯರು ಹೇಳಿಕೆ ನೀಡಿದ್ದಾರೆ. ದಂಪತಿಗೆ ವರ್ಷಿಣಿ ಮತ್ತು ಅಜಿತ್ ಎಂಬ ಇಬ್ಬರು ಮಕ್ಕಳಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ,(ಏಜೆನ್ಸೀಸ್​).