ನ್ಯೂಸ್

ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಅನುಮಾನಾಸ್ಪದ ಸಾವು; ತಲೆಗೆ ಶೂಟ್ ಮಾಡ್ಕೊಂಡ್ರಾ ಡಾಕ್ಟರ್ ರೂಪಾ?

ಚಿತ್ರದುರ್ಗ: ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಅವರ ಪತಿ ಡಾ.ರವಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಈ ಪ್ರಕರಣ ನಡೆದಿದೆ.

ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ ಇಂದು ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರು ಎಂಬ ಮಾಹಿತಿ ಬಂದಿತ್ತು. ಚಿತ್ರದುರ್ಗದ ವಿ.ಪಿ. ಎಕ್ಸ್​ಟೆನ್ಷನ್ ಬಡಾವಣೆಯ‌ ಮನೆಯಲ್ಲಿ ಈ ಘಟನೆ ನಡೆದಿದೆ.

ಮನೆಯಲ್ಲಿ ಕಾಲು ಜಾರಿ ಬಿದ್ದು, ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ ಎನ್ನಲಾಗಿದೆ. ಅದರಲ್ಲೂ ಜಿಲ್ಲಾಸ್ಪತ್ರೆಗೆ ತೆರಳುವಷ್ಟರಲ್ಲಿ ಸಾವು ಎಂಬ ಮಾಹಿತಿ ಬಂದಿರುವುದು ಅನುಮಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಪ್ರಕರಣದ ಬಗ್ಗೆ ಡಾ.ರೂಪಾ ಪತಿ ಡಾ.ರವಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಚಿತ್ರದುರ್ಗ ನಗರ ಠಾಣೆ ಪೊಲೀಸರು ಸ್ತಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಾಗಿದೆ. ಇನ್ನೊಂದು ಮಾಹಿತಿ ಪ್ರಕಾರ, ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆಯೂ ಇದೆ.