ನ್ಯೂಸ್

ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ಹೊರ ಹಾಕ್ತೇವೆ ಎಂದ ಸುವೇಂದು

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಮುಂದಿನ ಚುನಾವಣೆ ಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಎಂಸಿಯ ಎಲ್ಲಾ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ನಾವು ಹೊರಹಾಕಲಿದ್ದೇವೆ ಎಂದು ವಿಪಕ್ಷ ನಾಯಕ ಸುವೇಂದು ಅಧಿಕಾರಿ ಹೇಳಿಕೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಸರ್ಕಾರ ಮುಸ್ಲಿಂ ಲೀಗ್​ನ ಎರಡನೇ ಆವೃತ್ತಿಯಂತೆ ವರ್ತಿಸುತ್ತಿದೆ. ಈ ಬಾರಿ ಬಂಗಾಳದ ಜನ ಮಮತಾ ಸರ್ಕಾರವನ್ನು ಬೇರು ಸಮೇತ ಕಿತ್ತು ಹಾಕಲಿದ್ದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ನಮ್ಮ ಸರ್ಕಾರ ಬಂದ ಬಳಿಕ ಮುಸ್ಲಿಂ ಶಾಸಕರಿಗೆ ವಿಧಾನಸಭೆಗೆ ಆಗಮಿಸಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಸುವೇಂದು ಹೇಳಿಕೆ ಬಗ್ಗೆ ಟಿಎಂಸಿ ಆಕ್ರೋಶ ವ್ಯಕ್ತಪಡಿಸಿದ್ದು, ಜನಪ್ರತಿನಿಧಿ ಈ ರೀತಿಯಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದಿದೆ. ಬಿಜೆಪಿ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುವ ಬಗ್ಗೆ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.