ನ್ಯೂಸ್

17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಸ್ವಾಮಿ ಚೈತನ್ಯಾನಂದ ಸರಸ್ವತಿ ಬಂಧಿಸಿದ ಪೊಲೀಸರು| Arrest

Arrest: ದೆಹಲಿಯಲ್ಲಿ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥ ಸಾರಥಿಯನ್ನು ಉತ್ತರ ಪ್ರದೇಶದ ಆಗ್ರಾದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಭಾನುವಾರ(ಸೆ. 28) ವರದಿಯಾಗಿದೆ.

ದೆಹಲಿಯ ಐಷಾರಾಮಿ ವಸಂತ್ ಕುಂಜ್ ಪ್ರದೇಶದಲ್ಲಿರುವ ಖಾಸಗಿ  ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ನ ನಿರ್ದೇಶಕರಾಗಿದ್ದ ಸ್ವಾಮಿ ಚೈತನ್ಯಾನಂದ ಸರಸ್ವತಿ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಭಾಷೆ ಬಳಕೆ, ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಹಾಗೂ ಅತ್ಯಾಚಾರದ ಆರೋಪವಿದ್ದು, ಈ ಹಿನ್ನೆಲೆ ಬಂಧಿಸಲಾಗಿದೆ.

ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ವಿಭಾಗದಲ್ಲಿ ವಿದ್ಯಾರ್ಥಿವೇತನದೊಂದಿಗೆ ಸ್ನಾತಕೋತ್ತರ ನಿರ್ವಹಣಾ ಡಿಪ್ಲೊಮಾ ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ, ವಿದೇಶ ಪ್ರವಾಸದ ಆಸೆ ತೋರಿಸಿ ಕಿರುಕುಳ ನೀಡಿದ್ದಾರೆ. ಅದಕ್ಕೆ ಕಾಲೇಜಿನ ಪ್ರಾಧ್ಯಪಕರು, ಹಾಸ್ಟೆಲ್ ವಾರ್ಡನ್​ಗಳು ಸಾಥ್ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. (ಏಜೆನ್ಸೀಸ್)