ಡಾ.ಶ್ಯಾಮಾಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ಅಂಗವಾಗಿ ತಾಯಿ ಹೆಸರಿನಲ್ಲಿ ಗಿಡ ನೆಡುವ ಅಭಿಯಾನದಲ್ಲಿ ಸೋಮವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ಗಿಡ ವಿತರಿಸಿದರು 
ನ್ಯೂಸ್

ಪ್ರಕೃತಿ ಉಳಿವಿನಿಂದ ಉತ್ತಮ ಬದುಕು : ಗಿಡ ವಿತರಿಸಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಶಯ

ಹೆಬ್ರಿ: ಗಿಡ ನೆಡುವುದು ಎಷ್ಟು ಮುಖ್ಯವೋ ಅದನ್ನು ಪೂಜಿಸುವುದು ಅಷ್ಟೇ ಮುಖ್ಯ. ನಾಡು ಇದ್ದರೆ ಮಾತ್ರ ನಾವು ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಗುರ್ಮೆ ಸುರೇಶ ಶೆಟ್ಟಿ ಹೇಳಿದರು. ಡಾ.ಶ್ಯಾಮಾಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ಅಂಗವಾಗಿ ತಾಯಿ ಹೆಸರಿನಲ್ಲಿ ಗಿಡ ನೆಡುವ ಅಭಿಯಾನದಲ್ಲಿ ಸೋಮವಾರ ಹಿರಿಯಡಕ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ಗಿಡ ವಿತರಿಸಿ ಮಾತನಾಡಿದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷೆ ಜಯಂತಿ ಶೆಟ್ಟಿ, ಕೊಡಿಬೆಟ್ಟು ಗ್ರಾಪಂ ಅಧ್ಯಕ್ಷ ಸಂದೀಪ್ ಮಡಿವಾಳ, ಬೊಮ್ಮರಬೆಟ್ಟು ಗ್ರಾಮ ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಯಾನಂದ ಹೆಗಡೆ ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.