ಮುಂಬೈ: ಕರೊನಾ ಸೋಂಕಿತ, ತಬ್ಲಿಘಿ ಜಮಾತ್ ಸಂಘಟನೆಯ ಸದಸ್ಯನೋರ್ವ ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಕೋಲಾ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಟ್ಟಿದ್ದ 30ವರ್ಷದ ಈ ವ್ಯಕ್ತಿಯಲ್ಲಿ ಕರೊನಾ ಸೋಂಕು ಇರುವುದು ಶುಕ್ರವಾರ ದೃಢಪಟ್ಟಿತ್ತು. ಶನಿವಾರ ಮುಂಜಾನೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕರೊನಾ ಸೋಂಕಿತನನ್ನು ಐಸೋಲೇಶನ್ ವಾರ್ಡ್ನಲ್ಲಿ ದಾಖಲಿಸಲಾಗಿತ್ತು. ಇಂದು ಮುಂಜಾನೆ ವಾರ್ಡ್ನ ವಾಶ್ರೂಂನಲ್ಲಿ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡು ಮೃತಪಟ್ಟಿದ್ದಾಗಿ ವರದಿಯಾಗಿದೆ.
ಈ ವ್ಯಕ್ತಿ ಮೂಲತಃ ಆಸ್ಸಾಂನವನು. ದೆಹಲಿಯ ನಿಜಾಮುದ್ದೀನ್ ಮರ್ಖಜ್ನಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇನ್ನೂ ಕೆಲವು ತಬ್ಲಿಘಿ ಜಮಾತ್ನ ಸದಸ್ಯರ ಜತೆ ಮಹಾರಾಷ್ಟ್ರದ ಅಕೋಲಾಕ್ಕೆ ಆಗಮಿಸಿದ್ದ.
ಕೆಲವು ದಿನಗಳ ಹಿಂದೆ ಕರೊನಾ ಲಕ್ಷಣಗಳು ಕಂಡುಬಂದಿದ್ದರಿಂದ ಅಕೋಲಾದ ಆಸ್ಪತ್ರೆಗೆ ದಾಖಲಾಗಿದ್ದ. ಈತ ಆತ್ಮಹತ್ಯೆ ಮಾಡಿಕೊಂಡಿರುವ ಆಸ್ಪತ್ರೆಗೆ ಭೇಟಿ ಕೊಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭಾರತದಲ್ಲಿ ಇದುವರೆಗೆ ಕರೊನಾ ಸೋಂಕಿತರ ಸಂಖ್ಯೆ 7447ಕ್ಕೆ ಏರಿದ್ದು. ಮಹಾರಾಷ್ಟ್ರದಲ್ಲಿ 1574 ಮಂದಿ ಇದ್ದಾರೆ. (ಏಜೆನ್ಸೀಸ್)