ನ್ಯೂಸ್

ಕೃಷಿಕರಿಗೆ ಬೆಳೆಹಾನಿ ಪರಿಹಾರ ವಿತರಿಸಲು ಕ್ರಮ

ಎ. ಆರ್. ರಘುರಾಮ

ಎಚ್ ಡಿ ಕೋಟೆ: ಬೆಳೆ ಹಾನಿ ಪರಿಹಾರದ ಮೊದಲನೇ ಮತ್ತು ಎರಡನೇ ಹಂತದಲ್ಲಿ ತಾಲೂಕಿನ 7,627 ಫಲಾನುಭವಿಗಳಿಗೆ 1.41 ಕೋಟಿ ರೂ. ಪರಿಹಾರದ ಮೊತ್ತ ವಿತರಿಸಲು ಕ್ರಮ ವಹಿಸಲಾಗುತ್ತದೆ ಎಂದು ತಹಸೀಲ್ದಾರ್ ಶ್ರೀನಿವಾಸ ತಿಳಿಸಿದರು. ತಾಲೂಕು ಆಡಳಿತ ಭವನದ ತಹಸೀಲ್ದಾರ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಸರ್ಕಾರ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 9 ತಾಲೂಕುಗಳನ್ನು ಬರಪೀಡಿತ ಎಂದ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಗಾರು ಋತುವಿನಲ್ಲಿ ಹಾನಿಯಾಗಿರುವ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿ ಆಧಾರದ ಮೇಲೆ ಮೊದಲನೇ ಕಂತಾಗಿ ಗರಿಷ್ಠ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ವಿತರಿಸಲಾಗುತ್ತಿದೆ ಎಂದರು.
ಬೆಳೆ ಹಾನಿ ಪರಿಹಾರದ ಹಣ ಖಾತೆಗೆ ಜಮಾ ಆಗದೆ ಇರುವ ಬಗ್ಗೆ ದೂರುಗಳನ್ನು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ಕೃಷಿಕರಿಗೆ ಅನುಕೂಲವಾಗುವಂತೆ ತಾಲೂಕು ಹಂತದಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಚ್.ಡಿ ಕೋಟೆ ತಾಲೂಕಿನ ರೈತರು 08228-255325 ಗೆ ಕರೆ ಮಾಡಬಹುದು ಎಂದವರು ಹೇಳಿದರು.