ಕಂಪಲಾಪುರ ಸಮೀಪದ ಬೋರೆಹೊಸಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಟೈಲರಿಂಗ್ ತರಬೇತಿ ಕಾರ್ಯಕ್ರಮದಲ್ಲಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿದರು. ತಾಲೂಕು ಯೋಜನಾಧಿಕಾರಿ ಸುರೇಶ್ ಶೆಟ್ಟಿ ಮತ್ತಿತರರು ಇದ್ದರು. 
ನ್ಯೂಸ್

ಮಹಿಳೆಯರಿಗೆ ಟೈಲರಿಂಗ್ ತರಬೇತಿ ಶಿಬಿರ

ಎಂ.ರವಿ

ಕಂಪಲಾಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಂಪಲಾಪುರ ವಲಯದ ಬೋರೆಹೊಸಳ್ಳಿ ಗ್ರಾಮದಲ್ಲಿ ಬುಧವಾರ ಸ್ಫೂರ್ತಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಹಾಗೂ ಸಂಘದ ಸದಸ್ಯರಿಗೆ ಟೈಲರಿಂಗ್ ತರಬೇತಿ ಶಿಬಿರ ಆಯೋಜಿಸಲಾಗಿತ್ತು.


ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲೆ ಬಿ.ಸಿ.ಟ್ರಸ್ಟ್ ನಿರ್ದೇಶಕಿ ಲೀಲಾವತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರು ಕೇವಲ ಸಂಘದ ಹಣಕಾಸು ಚಟುವಟಿಕೆಗೆ ಮಾತ್ರ ಸೀಮಿತವಾಗಿರದೆ, ಇಂತಹ ತರಬೇತಿ ಶಿಬಿರಗಳಲ್ಲಿ ಭಾಗವಹಿಸಿ ಆರ್ಥಿಕವಾಗಿ ಸಬಲರಾಗಬೇಕು, ಸ್ವಂತ ದುಡಿಮೆಯಿಂದ ಕುಟುಂಬ ನಿರ್ವಹಣೆ ಮಾಡಿಕೊಳ್ಳಬೇಕು, ಜತೆಗೆ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕು ಎಂದರು.

ತಾಲೂಕು ಯೋಜನಾಧಿಕಾರಿ ಸುರೇಶ್‌ಶೆಟ್ಟಿ ಮಾತನಾಡಿ, ಮಹಿಳೆಯರು ಮನೆಗೆ ಮಾತ್ರ ಸೀಮಿತ ಎಂದುಕೊಳ್ಳಬಾರದು, ಬದಲಾಗಿ ಸ್ವಂತ ಉದ್ಯೋಗವನ್ನು ಕೈಯಲ್ಲಿಟ್ಡುಕೊಂಡು ಸ್ವಾವಲಂಬಿ ಬದುಕನ್ನು ತಮ್ಮದಾಗಿಸಿಕೊಳ್ಳಬೇಕು ಎಂದರು.

ಟೈಲರಿಂಗ್ ತರಬೇತಿ ಶಿಕ್ಷಕಿ ದಿವ್ಯಾ, ಒಕ್ಕೂಟದ ಅಧ್ಯಕ್ಷೆ ರಾಣಿ, ಗ್ರಾಪಂ ಮಾಜಿ ಅಧ್ಯಕ್ಷೆ ಚಂದ್ರಮ್ಮ, ವಲಯ ಮೇಲ್ವಿಚಾರಕಿ ರವಿಕಲಾಶೆಟ್ಡಿ, ಸೇವಾ ಪ್ರತಿನಿಧಿ ರೂಪಾ ಹಾಗೂ ಸದಸ್ಯರು ಹಾಜರಿದ್ದರು.