ನ್ಯೂಸ್

ಬಿಎಸ್​ಪಿ ಮುಖ್ಯಸ್ಥನ ಹತ್ಯೆ ಪ್ರಕರಣ; ಆರೋಪಿಯನ್ನು ಎನ್​ಕೌಂಟರ್​ ಮಾಡಿದ ಪೊಲೀಸರು

ಚೆನ್ನೈ: ತಮಿಳುನಾಡು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್​ಸ್ಟ್ರಾಂಗ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ​ಎನ್​​ಕೌಂಟರ್​ ಮಾಡಿದ್ದಾರೆ ಎಂದು ವರದಿಯಾಗಿದೆ.

ಬಿಎಸ್‌ಪಿ ರಾಜ್ಯಧ್ಯಕ್ಷ ಆರ್ಮ್​ಸ್ಟ್ರಾಂಗ್​ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ತಿರುವೆಂಗಡಂನನ್ನು ಚೆನ್ನೈನ ಮಾಧವರಂ ಬಳಿ ಎನ್​ಕೌಂಟರ್​ ಮಾಡಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ತಿರುವೆಂಗಡಂ ಹತ್ಯೆಗೂ ಮುನ್ನ ಆರ್ಮ್​ಸ್ಟ್ರಾಂಗ್​ ಚಲನವಲನಗಳ ಮೇಲೆ ನಿಗಾ ವಹಿಸಿ ಕೆಲ ದಿನಗಳ ಕಾಲ ಹಿಂಬಾಲಿಸಿದ್ದ. ಜುಲೈ 05ರಂದು ಪೆರಂಬದೂರಿನ ಅವರ ನಿವಾಸದ ಮೇಲೆ ದಾಳಿ ಮಾಡಿದ ಆರೋಪಿಗಳು ಅವರನ್ನು ಹತ್ಯೆ ಮಾಡಿದ್ದರು. ಬಳಿಕ ಆರೋಪಿಗಳು ತಲೆಮಾರಿಸಿಕೊಂಡಿದ್ದರು.

ಪ್ರಕರಣ ಸಂಬಂಧ 11 ಮಂದಿ ಶಂಕಿತರನ್ನು ಬಂಧಿಸಲಾಗಿದ್ದು, ಸ್ಥಳ ಪರಿಶೀಲನೆಗೆ ಕರೆದೊಯ್ದಿದ್ದ ವೇಳೆ ಆರೋಪಿ ತಿರುವೆಂಗಡಂ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ. ಈ ವೇಳೆ ಅಧಿಕಾರಿಗಳು ರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.