ಚೆನ್ನೈ: ಕಾಲೇಜು ವಿದ್ಯಾರ್ಥಿನಿಯೊಬ್ಬಳ (Student) ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನ ವಿಮಾನ ನಿಲ್ದಾಣದ ಬಳಿ ಭಾನುವಾರ (ನ.02) ನಡೆದಿದೆ.
ಪೊಲೀಸರು ಪ್ರಕಾರ, ಸಂತ್ರಸ್ತೆಯು ತನ್ನ ಸ್ನೇಹಿತನೊಂದಿಗೆ ಇರುವಂತಹ ಸಮಯದಲ್ಲಿ, ಆರೋಪಿಗಳು ಆತನ ಮೇಲೆ ಹಲ್ಲೆ ನಡೆಸಿ ಆಕೆಯನ್ನು ಅಪಹರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಬಿಹಾರ ಚುನಾವಣೆ; ಮೀನುಗಾರರೊಂದಿಗೆ ಸಂವಾದದ ವೇಳೆ ಕೆರೆಗೆ ಹಾರಿದ ರಾಹುಲ್ ಗಾಂಧಿ; ವಿಡಿಯೋ ವೈರಲ್| Rahul Gandhi
ಈ ಘಟನೆ ನಡೆದ ಕೂಡಲೇ ಸ್ನೇಹಿತನು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನಂತರ ಅಧಿಕಾರಿಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದಾಗ ಯುವತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ನಂತರ ಆಕೆಯನ್ನು ಹತ್ತಿರದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಆರೋಪಿಗಳು ಅಪರಾಧದ ಮಾಡುವ ಮೊದಲು ಭಾನುವಾರ ಮೋಟಾರ್ ಸೈಕಲ್ ಅನ್ನು ಕದ್ದಿದ್ದರು ಎಂದು ಮೂಲಗಳು ತಿಳಿಸಿವೆ. ಈ ವೇಳೆ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ತೃಣಮೂಲ ಕಾಂಗ್ರೆಸ್ ಶಾಸಕ ಜ್ಯೋತಿಪ್ರಿಯ ಮಲ್ಲಿಕ್ ಮನೆಗೆ ನುಗ್ಗಿ ಹಲ್ಲೆ ಮಾಡಿದ ಯುವಕ; ಬಂಧನ| Jyotipriya Mallick
ಈ ಆರೋಪದಡಿ ಅಧಿಕಾರಿಗಳು ಯುವತಿಯನ್ನು ವಿಚಾರಣೆ ನಡೆಸಿದ್ದು, ನಡೆದ ಘಟನೆಯನ್ನು ವಿವರಿಸಿದ್ದಾಳೆ. ಆಕೆಯ ಹೇಳಿಕೆ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಹುಡುಕಾಟ ನಡೆಸುತ್ತಿದ್ದು, ಅವರಿಗೆ ಕಾನೂನಿನ ಅಡಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಈ ವರ್ಷದ ಅಕ್ಟೋಬರ್ 2025 ರ ಬೆಂಗಳೂರಿನಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜು ಕ್ಯಾಂಪಸ್‌ನಲ್ಲಿ ಕಿರಿಯ ವಿದ್ಯಾರ್ಥಿಯೊಬ್ಬ ಹಿರಿಯ ವಿದ್ಯಾರ್ಥಿಯನ್ನು ಶೌಚಾಲಯಕ್ಕೆ ಬಲವಂತವಾಗಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿ ಮಾತ್ರೆ ಬೇಕಾ ಎಂದು ಕೇಳಿದ ಆರೋಪದಡಿ ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿತ್ತು. (ಏಜೆನ್ಸೀಸ್)