ನ್ಯೂಸ್

ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಲು ತಮಿಳುನಾಡು ಸರ್ವಪಕ್ಷಗಳ ಸಭೆ ನಿರ್ಧಾರ

ಬೆಂಗಳೂರು: ರಾಜ್ಯ ಪಾಲಿನ ಕಾವೇರಿ ನೀರು ಹರಿಸಲು ಹಿಂದೇಟು ಹಾಕುತ್ತಿದ್ದು, ಈ ವಿಚಾರದಲ್ಲಿ ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಲು ಮಂಗಳವಾರ ನಡೆದ ತಮಿಳುನಾಡು ಶಾಸಕಾಂಗ ಪಕ್ಷದ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ದೇಶನದಂತೆ ಪ್ರತಿದಿನ ಒಂದು ಟಿಎಂಸಿ ಅಡಿ ನೀರು ಬಿಡಲು ನಿರಾಕರಿಸುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಸಭೆಯು ಖಂಡನಾ ನಿರ್ಣಯ ಅಂಗೀಕರಿಸಿತು.

ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್‌ನ ಆದೇಶದಂತೆ ರಾಜ್ಯಕ್ಕೆ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕ್ಕೆ ಸೂಚನೆ ನೀಡಬೇಕು ಎಂದು ಸಭೆಯು ಮತ್ತೊಂದು ನಿರ್ಣಯ ತೆಗೆದುಕೊಳ್ಳಲಾಯಿತು.

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿನಿಧಿಸುವ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ನೆರೆಯ ರಾಜ್ಯಕ್ಕೆ ನೀರು ಬಿಡಲು ಕರ್ನಾಟಕದ ಕಾಂಗ್ರೆಸ್ ಸರ್ಕಾರವು "ಸಾರಾಸಗಟಾಗಿ ನಿರಾಕರಣೆ" ಯನ್ನು ಖಂಡಿಸಿತು.