ನ್ಯೂಸ್

ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್​ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು | MK Stalin

MK Stalin: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್​ ಅನಾರೋಗ್ಯ ಹಿನ್ನೆಲೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ಎಂದಿನಂತೆ ವಾಕಿಂಗ್ ಮಾಡುವಾಗ ತಲೆಸುತ್ತು ಬಂದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಯುತ್ತಿದ್ದು, ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಇಂದು ಬೆಳಗ್ಗೆ ವಾಕಿಂಗ್ ವೇಳೆ ತಲೆ ಸುತ್ತುವಿಕೆ ಸಂಭವಿಸಿದ ನಂತರ ಸಿಎಂರನ್ನ ಆಸ್ಪತಗ್ರೆ ಕರೆತಂದಿದ್ದು, ಅನಾರೋಗ್ಯದ ಬಗ್ಗೆ ಎಲ್ಲಾ ರೀತಿಯ ತಪಾಸಣೆಗಳನ್ನ ನಡೆಸಲಾಗುತ್ತಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯ ಡಾ.ಅನಿಲ್.ಬಿ.ಜಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.