ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ ಸುಸೂತ್ರ ಮತ್ತು ದೋಷರಹಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಪೊಲೀಸ್ ಇಲಾಖೆ ಆದೇಶಿಸಿದೆ.
ಸೆಪ್ಟೆಂಬರ್ 3ರ ಬೆಳಗ್ಗೆ 8 ರಿಂದ 5 ಗಂಟೆ ವರೆಗೆ ನಗರದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ವಿಧಿಸಲಾಗಿದೆ. ಜೆರಾಕ್ಸ್ ಅಂಗಡಿಗಳು ತೆರೆಯದಂತೆ ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.