ಇಂದೋರ್: ಇತ್ತೀಚೆಗೆ ಚಿಕ್ಕವಯಸ್ಸಿನವರೂ ಹೃದಯಾಘಾತಕ್ಕೀಡಾಗಿ ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆ ಪಟ್ಟಿಗೆ ಹದಿಹರೆಯದ ವಿದ್ಯಾರ್ಥಿನಿಯೊಬ್ಬಳೂ ಸೇರಿದ್ದಾಳೆ. ಶಾಲೆಗೆ ತೆರಳಿದ್ದ ಈಕೆ ಅಲ್ಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ.
ಮಧ್ಯಪ್ರದೇಶದ ಇಂದೋರ್ನ ಉಷಾನಗರದಲ್ಲಿರುವ ಶಾಲೆಯೊಂದರಲ್ಲಿ ಈ ಪ್ರಕರಣ ನಡೆದಿದೆ, ಶುಕ್ರವಾರ ಪೊಲೀಸರು ಈ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. 11ನೇ ತರಗತಿ ವಿದ್ಯಾರ್ಥಿನಿ, ವೃಂದಾ ತ್ರಿಪಾಠಿ (16) ಸಾವಿಗೀಡಾದ ವಿದ್ಯಾರ್ಥಿನಿ. ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕಾಗಿ ರಿಹರ್ಸಲ್ಗೆಂದು ಈಕೆ ಶಾಲೆಗೆ ಬಂದಾಗ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ: ಗಂಡನ ನಾಲಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡ್ತಿ; ವಾಪಸ್ ಬಾ ಎಂದು ತವರಿಗೆ ಹೋಗಿ ಕರೆದಿದ್ದೇ ತಪ್ಪಾಯ್ತು!
ಬುಧವಾರ ರಿಹರ್ಸಲ್ಗೆಂದು ಹೋಗಿದ್ದ ಈಕೆ ಅಲ್ಲೇ ಕುಸಿದು ಬಿದ್ದಿದ್ದಳು. ಅಸ್ವಸ್ಥಗೊಂಡ ಈಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದ್ದಾರೆ. ವಿದ್ಯಾರ್ಥಿನಿ ಕೋಲ್ಡ್ ವೇವ್ನಿಂದಾಗಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.