ಹೈದರಾಬಾದ್: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್(Telangana High court)ಗೆ ಜಾಮೀನು ಮಂಜೂರಾಗಿದೆ. ತೆಲಂಗಾಣ ಹೈಕೋರ್ಟ್ ಜಾನಿ ಮಾಸ್ಟರ್ ಗೆ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ.
ನೃತ್ಯ ನಿರ್ದೇಶಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜಾನಿ ಮಾಸ್ಟರ್‌ನನ್ನು ಹೈದರಾಬಾದ್ನ ನರಸಿಂಗಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿಕೊಂಡು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕಳೆದ ಎರಡು ವಾರಗಳಿಂದ ಜಾನಿ ಮಾಸ್ಟರ್ ಚಂಚಲಗೂಡ ಜೈಲಿನಲ್ಲಿದ್ದರು.
ಇನ್ನು ಜಾನಿ ಮಾಸ್ಟರ್ ಗೆ ಅತ್ಯುತ್ತಮ ನೃತ್ಯ ಸಂಯೋಜಕ ರಾಷ್ಟ್ರೀಯ ಪ್ರಶಸ್ತಿಯನ್ನು ಘೋಷಿಸಲಾಗಿತ್ತಾದರೂ, ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ಹಿಂಪಡೆಯಲಾಗಿದೆ.
ಹೈಕೋರ್ಟ್ ಜಾಮೀನು ನೀಡಿರುವುದರಿಂದ ಗುರುವಾರ ಸಂಜೆ ಜಾನಿ ಮಾಸ್ಟರ್ ಚಂಚಲ್ ಗುಡಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.