ದೆಹಲಿ: ಭಾರತ ಹಾಗೂ ಪಾಕಿಸ್ತಾನ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಮೇ 9) ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಮತ್ತು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸದ್ಯದ ಭದ್ರತಾ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು ಮತ್ತು ಭವಿಷ್ಯದ ಕಾರ್ಯತಂತ್ರವನ್ನು ನಿರ್ಧರಿಸಲು ತುರ್ತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.
ನಿನ್ನೆ ರಾತ್ರಿ 8:30 ರ ಸುಮಾರಿಗೆ ಪ್ರಾರಂಭವಾದ ರಾಜಸ್ಥಾನ, ಗುಜರಾತ್ ಮತ್ತು ಪಂಜಾಬ್‌ನ ಹಲವಾರು ನಗರಗಳು ಮತ್ತು ಸೇನಾ ನೆಲೆಗಳ ಮೇಲೆ ಪಾಕಿಸ್ತಾನ ನಡೆಸಿದ ಎರಡನೇ ಸುತ್ತಿನ ವಾಯುದಾಳಿಯನ್ನು ಭಾರತ ವಿಫಲಗೊಳಿಸಿತು. ಜಮ್ಮು, ಪಠಾಣ್‌ಕೋಟ್ ಮತ್ತು ಉಧಂಪುರದಲ್ಲಿರುವ ಸೇನಾ ನೆಲೆಗಳನ್ನು ಸಹ ಪಾಕಿಸ್ತಾನ ಗುರಿಯಾಗಿಸಿಕೊಂಡಿತು, ಭಾರತೀಯ ಸೇನೆಯು ತ್ವರಿತವಾಗಿ ಪ್ರತೀಕಾರ ತೀರಿಸಿಕೊಂಡಿತು.
ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ S-400 ಕ್ಷಿಪಣಿ ಸಮರ; ಈ ವಾಯು ರಕ್ಷಣಾ ವ್ಯವಸ್ಥೆ ಬೇರೆ ದೇಶಗಳಲ್ಲೂ ಇದ್ಯಾ| S-400 Missile
ಗಡಿಯಾಚೆಗಿನ ಗುಂಡಿನ ದಾಳಿಗೆ ಭಾರತೀಯ ಪಡೆಗಳು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿದ್ದರಿಂದ ನಿಯಂತ್ರಣ ರೇಖೆಯ ಉದ್ದಕ್ಕೂ ಇರುವ ಅನೇಕ ಪಾಕಿಸ್ತಾನಿ ಮಿಲಿಟರಿ ಪೋಸ್ಟ್‌ಗಳು ನಾಶವಾಗಿವೆ ಎಂದು ಮೂಲಗಳು ತಿಳಿಸಿವೆ.
(ಏಜೆನ್ಸೀಸ್)