ನ್ಯೂಸ್

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ! | Mysore

Mysore: ಖಾಸಗಿ ಬಸ್​ ಮತ್ತು ಲಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಶುಕ್ರವಾರ ಬೆಳ್ಳಂ ಬೆಳಗ್ಗೆ ನಡೆದಿದೆ.

ಬಸ್ ಚಾಲಕ, ಕ್ಲಿನರ್ ಸೇರಿ ಸಹ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರಿನಿಂದ ಹುಣಸೂರಿನ ಕಡೆಗೆ ಬರುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿ ಮತ್ತು ಕೇರಳದ ಕ್ಯಾಲಿಕಟ್ ನಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ​ ಡಿಕ್ಕಿ ಹೊಡೆದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಹೆದ್ದಾರಿಯಲ್ಲಿ ಬಿದಿದ್ದ ಮರಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೆಳಗಿನ ಜಾವ 4:30ರ ಸುಮಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹುಣಸೂರು ಪೋಲಿಸರು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.