Donald Trump: ಥೈಲ್ಯಾಂಡ್ ಮತ್ತು ಕಾಂಬೋಡಿಯಾದ ನಾಯಕರು ಕದನ ವಿರಾಮದ ಕುರಿತು ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಈ ಬಗ್ಗೆ ಟ್ರೂತ್ ಸೋಶಿಯಲ್ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಕದನ ವಿರಾಮದ ಕುರಿತು ಕಾಂಬೋಡಿಯಾ ಪ್ರಧಾನಿ ಹುನ್ ಮಾನೆಟ್ ಮತ್ತು ಥೈಲ್ಯಾಂಡ್ ಹಂಗಾಮಿ ಪ್ರಧಾನಿ ಜತೆಗೆ ಯುದ್ಧ ನಿಲ್ಲಿಸುವ ಬಗ್ಗೆ ಮಾತನಾಡಿದ್ದೇನೆ. ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಮತ್ತು ಕದನ ವಿರಾಮವನ್ನು ತಕ್ಷಣ ಘೋಷಿಸುವಂತೆ ಸಲಹೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ನಾನು ಕಾಂಬೋಡಿಯಾದ ಪ್ರಧಾನ ಮಂತ್ರಿಯೊಂದಿಗೆ ಉತ್ತಮ ಮಾತುಕತೆ ನಡೆಸಿದ್ದೇನೆ ಮತ್ತು ಥೈಲ್ಯಾಂಡ್ ಹಂಗಾಮಿ ಪ್ರಧಾನಮಂತ್ರಿಗೆ ಕದನ ವಿರಾಮದ ಬಗ್ಗೆ ತಿಳಿಸಿದ್ದೇನೆ. ಎರಡೂ ಪಕ್ಷಗಳು ತಕ್ಷಣದ ಕದನ ವಿರಾಮ ಮತ್ತು ಶಾಂತಿಯನ್ನು ಬಯಸುತ್ತಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಭುವನೇಶ್ವರ ಮೆಟ್ರೋ ಒಪ್ಪಂದ ರದ್ದು: ಬಿಜೆಪಿ ಸರ್ಕಾರದ ವಿರುದ್ಧ ನವೀನ್ ಪಟ್ನಾಯಕ್ ಕಿಡಿ | Naveen Patnaik
ಅಲ್ಲದೆ, ನಾವು ಉಭಯ ದೇಶಗಳೊಂದಿಗೆ ಉತ್ತಮ ವ್ಯಾಪಾರ ನಡೆಸುತ್ತೇವೆ. ಒಂದು ವೇಳೆ ಯುದ್ಧವನ್ನು ನಿಲ್ಲಿಸದಿದ್ದರೆ ಎರೆಡು ರಾಷ್ಟ್ರಗಳೊಂದಿಗೆ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದಗಳನ್ನು ರದ್ದು ಮಾಡುತ್ತೇವೆ ಎಂದು ಟ್ರಂಪ್ ಎಚ್ಚರಿಕೆ ನೀಡಿದರು.
ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವಿನ ಘರ್ಷಣೆಯು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಉಭಯ ದೇಶಗಳ ನಡುವಿನ ಕ್ಷಿಪಣಿ ದಾಳಿಯಲ್ಲಿ 33 ಜನರು ಮೃತಪಟ್ಟಿದ್ದಾರೆ. 1.68 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.