ನ್ಯೂಸ್

ಎಐಎಡಿಎಂಕೆ ಜೊತೆ ದಳಪತಿ ವಿಜಯ್ ನೇತೃತ್ವದ ಟಿವಿಕೆ ಮೈತ್ರಿ: ಪರೋಕ್ಷವಾಗಿ ಸುಳಿವು ನೀಡಿದ ಮಾಜಿ ಸಿಎಂ ಇಪಿಎಸ್​| Edappadi Palaniswami

Salem: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾಜಿ ಸಿಎಂ ಮತ್ತು ಎಐಎಡಿಎಂಕೆ ಮುಖ್ಯಸ್ಥ Edappadi Palaniswami ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ಸೇಲಂನಲ್ಲಿ ಮಂಗಳವಾರ(ಅ. 14) ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಜಿಲ್ಲಾ ಕಾರ್ಯದರ್ಶಿಗಳು ಮತ್ತು ಕಾರ್ಯಕರ್ತರು ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಇನ್ನು ತಮ್ಮ ಪಕ್ಷದ ಪ್ರಚಾರದಲ್ಲಿ ಟಿವಿಕೆ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಭಾಗವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಬಾರಿ ನಮ್ಮ ನೇತೃತ್ವದಲ್ಲಿ ಬಲವಾದ ಮೈತ್ರಿಕೂಟ ರಚನೆಯಾಗಲಿದೆ. ಮೈತ್ರಿಕೂಟದಲ್ಲಿರುವ ಪಕ್ಷಗಳು ಮುಕ್ತವಾಗಿರುತ್ತವೆ. ಆದರೆ ಡಿಎಂಕೆ ಮೈತ್ರಿಕೂಟದಲ್ಲಿರುವ ಕಾಂಗ್ರೆಸ್, ಡಿಪಿಐ ಹಾಗೂ ಎಡ ಪಕ್ಷಗಳು ಗುಲಾಮರು, ಅವರೆಂದಿಗೂ ಆಡಳಿತ ಪಕ್ಷವನ್ನು ಟೀಕಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ. (ಏಜೆನ್ಸೀಸ್)