ನ್ಯೂಸ್

ವಕ್ಫ್ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್| Vijay

ನಟ ವಿಜಯ್ ಸಲ್ಲಿಸಿರುವ ಅರ್ಜಿಯು ಏಪ್ರಿಲ್ 16 ರಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರಲಿದೆ. ಈ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದು ಮುಸ್ಲಿಂ ಸಮುದಾಯದ ಬಗ್ಗೆ ತಾರತಮ್ಯವನ್ನು ಹೊಂದಿದ್ದು, ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಗಳಲ್ಲಿ ಉಲ್ಲೇಖಿಸಲಾಗಿದೆ.

Vijay | 2025 ರ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಈಗಾಗಲೇ ದೇಶದಾದ್ಯಂತ ಪ್ರತಿಭಟನೆಗಳು ಆರಂಭಗೊಂಡಿವೆ. ಈ ನಡುವೆ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ತಮಿಳು ಸೂಪರ್‌ಸ್ಟಾರ್ ಹಾಗೂ ತಮಿಳು ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವಕ್ಫ್ ಕಾಯ್ದೆಯ ವಿರುದ್ಧ ಇಲ್ಲಿಯವರೆಗೆ ನ್ಯಾಯಾಲಯದ ಮೆಟ್ಟಿಲೇರಿರುವವರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದರಾದ ಮೊಹಮ್ಮದ್ ಜಾವೇದ್ ಮತ್ತು ಇಮ್ರಾನ್ ಪ್ರತಾಪ್‌ಗರ್ಹಿ, ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮತ್ತು ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಮತ್ತು ಸಂಸದ ಚಂದ್ರಶೇಖರ್ ಆಜಾದ್ ಸೇರಿದ್ದಾರೆ.

(ಏಜೆನ್ಸೀಸ್)