ಮುಂಬೈ: ಬಾಲಿವುಡ್ನ ಬಾದ್‌ಶಾ ಶಾರುಖ್ ಖಾನ್ ನಟನೆಯ ಬಹುನಿರೀಕ್ಷಿತ 'ಜವಾನ್' ಚಿತ್ರದಲ್ಲಿ ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾಹಿತಿಯನ್ನು ಇದೀಗ ಸಿನಿಮಾದಲ್ಲಿ ಕೆಲಸ ಮಾಡಿದ ಸಾಹಸ ನಿರ್ದೇಶಕ ಯಾನಿಕ್ ಬೆನ್ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.
ಅಟ್ಲಿ ಕುಮಾರ್ ನಿರ್ದೇಶನದ ಆಕ್ಷನ್-ಪ್ಯಾಕ್ಡ್ ಜವಾನ್ ಸಿನಿಮಾದಲ್ಲಿ ಶಾರೂಖ್ಗೆ ನಾಯಕಿಯಾಗಿ ನಯನತಾರಾ ಅಭಿನಯಿಸಿದ್ದು, ಚಿತ್ರದಲ್ಲಿ ವಿಜಯ್ ಸೇತುಪತಿ, ಪ್ರಿಯಾಮಣಿ, ಸಾನ್ಯ ಮಲ್ಹೋತ್ರಾ, ಯೋಗಿ ಬಾಬು ಸೇರಿದಂತೆ ಮುಂತಾದ ಕಲಾವಿದರು ನಟಿಸಿದ್ದಾರೆ. ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಬ್ಯಾನರ್ನಲ್ಲಿ ಮೂಡಿಬಂದಿರುವ ಈ ಸಿನಿಮಾ ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಿನಿ ವರದಿ ಮಾಹಿತಿ ನೀಡಿದೆ,(ಏಜೆನ್ಸೀಸ್).