ನ್ಯೂಸ್

27ರಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ

ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯು ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಜೂ.27ರಂದು ಮಧ್ಯಾಹ್ನ 12ಕ್ಕೆ ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದೆ ಎಂದು ಸ್ವಾಗತ ಸಮಿತಿ ಸಂಚಾಲಕ ಡಿ.ಮಂಜುನಾಥ ಹೇಳಿದರು.

ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶ್ರೀ ಸಾಯಿನಾಥ ಸ್ವಾಮೀಜಿ, ಎಂಎಲ್‌ಸಿ ಎಸ್.ಎಲ್.ಭೋಜೇಗೌಡ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಕೃಷಿ ವಿವಿ ಸಿಂಡಿಕೇಟ್ ಸದಸ್ಯ ಶಶಾಂಕ್, ಹಾಪ್‌ಕಾಮ್ಸ್ ಅಧ್ಯಕ್ಷ ಸಂತೇಕಡೂರು ವಿಜಯಕುಮಾರ್ ಅತಿಥಿಗಳಾಗಿ ಭಾಗವಹಿಸುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಸ್‌ಎಸ್‌ಎಲ್‌ಸಿ, ಪಿಯು, ವಿಶ್ವವಿದ್ಯಾಲಯ, ಕೃಷಿ, ವೈದ್ಯಕೀಯ ಸೇರಿ ವಿವಿಧ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ. ಗ್ರಾಮೀಣ ಆಟೋಟ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ನಾಡಪ್ರಭು ಕೆಂಪೇಗೌಡರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ, ಗೋ.ರಮೇಶ್ ಗೌಡ, ಶಂಕರ್, ಡಾ. ಶಾಂತಾ ಸುರೇಂದ್ರ, ಪ್ರತಿಮಾ ಡಾಕಪ್ಪಗೌಡ, ತಾಯಿಮನೆ ಸುದರ್ಶನ್, ರಾಕೇಶ್ ಗೌಡ, ಎಂ.ಎ.ರಮೇಶ್ ಹೆಗ್ಡೆ, ರಘುರಾಜ್, ಭಾರತಿ ರಾಮಕೃಷ್ಣ, ಶಶಿಕಲಾ ಪ್ರಶಾಂತ, ಗುರುರಾಜ್ ಗೌಡ, ರಘುಗೌಡ, ಭೈರಾಪುರ ಶಿವಪ್ಪಗೌಡ ಸುದ್ದಿಗೋಷ್ಠಿಯಲ್ಲಿದ್ದರು.