ನ್ಯೂಸ್

ಪತ್ನಿ ಸಂಕಟಕ್ಕೆ ವಿಷಾದ ವ್ಯಕ್ತಪಡಿಸಿದ ಸಿಎಂ

ಬೆಂಗಳೂರು: ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಮುಡಾ ನೀಡಿರುವ 14 ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದೂ ಪ್ರತಿಕ್ರಿಯಿಸಿದ್ದಾರೆ.

ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದಿರುವ ಅವರು, ತಾವು ರಾಜೀನಾಮೆ ಕೊಡುವುದಿಲ್ಲ ಎಂಬುದನ್ನು ಪುನಃ ಪುನಃ ಸ್ಪಷ್ಟಪಡಿಸುತ್ತಲೇ ಸಾಗಿದ್ದಾರೆ.

ಸೋಮವಾರದ ಬೆಳವಣಿಗೆಯಲ್ಲಿ ಸಿಎಂ ಪತ್ನಿ ಪಾರ್ವತಿಯವರು ತಮ್ಮ ಹೆಸರಿಗೆ ಪರಿಹಾರ ರೂಪದಲ್ಲಿ ಮಂಜೂರಾಗಿದ್ದ ನಿವೇಶನವನ್ನು ಮುಡಾಗೆ ವಾಪಸ್ ಮಾಡುವುದಾಗಿ ೋಷಿಸಿದ್ದರು. ಈ ಸಂಬಂಧ ಮುಡಾಗೆ ಬರೆದ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು. ಬಳಿಕ ಮುಡಾಗೆ ಮತ್ತೊಂದು ಪ್ರತ್ಯೇಕ ಪತ್ರವನ್ನೂ ಬರೆದಿದ್ದಾರೆ ಎಂಬುದು ಉಲ್ಲೇಖಾರ್ಹ ಸಂಗತಿ.