ನ್ಯೂಸ್

ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟದೆ ಬಿಡುವುದಿಲ್ಲ; ಬಿ.ವೈ.ವಿಜಯೇಂದ್ರ | Congress Govt

Congress Govt: ಅಹಿಂದ ಹೆಸರಿನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಪರಿಶಿಷ್ಟರ ಕರಾಳ ದಿನಕ್ಕೆ ಕಾರಣರಾಗಿದ್ದಾರೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.

ಎಸ್‍ಇಪಿ, ಟಿಎಸ್‍ಪಿ ಹಣವನ್ನು ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿರುವ ಈ ಸರ್ಕಾರ ಶೋಷಿತರ ಕಣ್ಣಲ್ಲಿ ನೀರು ಹರಿಸಿದರೆ ಆ ಶಾಪ ನಿಮ್ಮ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಹರಿಹಾಯ್ದರು.