ನ್ಯೂಸ್

ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಹ್ವಾನಿಸಿದ್ದ ಅರ್ಜಿ ದಿನಾಂಕ ವಿಸ್ತರಣೆ

ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ನಿಗದಿ ಪಡಿಸಿದ್ದ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪರಿಷ್ಕರಿಸಿದೆ.

ಅರ್ಹ ಶಿಕ್ಷಕರು ಆ. 21ರವರೆಗೆ ಅರ್ಜಿ ಸಲ್ಲಿಸಬಹುದು, ಆ. 22 ರಿಂದ ಆ. 26ರವರೆಗೆ ತಾಲೂಕು ಮಟ್ಟದ ಆಯ್ಕೆ ಸಮಿತಿ ಪರಿಶೀಲನೆ ನಡೆಸಿ, ಜಿಲ್ಲಾ ಮಟ್ಟದ ಸಮಿತಿಗೆ ಶಿಫಾರಸ್ಸು ಮಾಡಲಿದೆ. ಜಿಲ್ಲಾ ಮಟ್ಟದ ಸಮಿತಿ. ಆ. 27 ರಿಂದ ಆ. 29ರವರಗೆ ಪರಿಶೀಲಿಸಿ ನಡೆಸಿ ರಾಜ್ಯ ಮಟ್ಟದ ಸಮಿತಿಗೆ ಶಿಫಾರಸ್ಸು ಮಾಡಲಿದೆ. ರಾಜ್ಯ ಮಟ್ಟದ ಸಮಿತಿ ಆ. 30ರಿಂದ ಸೆ.1ರೊಳಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಸೆ. 2ಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಸೆಪ್ಟೆಂಬರ್ 3ಕ್ಕೆ ಪ್ರಶಸ್ತಿಗೆ ಆಯ್ಕೆ ಆದವರಿಗೆ ಮಾಹಿತಿ ನೀಡಲಾಗುತ್ತದೆ. ಸೆ. 5ಕ್ಕೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಹೊಸ ವೇಳಾಪಟ್ಟಿಯಲ್ಲಿ ಪ್ರಕಟಿಸಲಾಗಿದೆ.

ಈ ಮೊದಲು ಆಗಸ್ಟ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವೆಂದು ಸರ್ಕಾರ ಹೇಳಿತ್ತು.