ಚಾಮರಾಜನಗರ: ನಿಗದಿಯಂತೆ ಮಾ. 27ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಸಂಬಂಧ ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರೊಂದಿಗೆ ರ್ಚಚಿಸಿ ಮಾ. 23ರಂದು ನಿಲುವು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
ಕರೊನಾ ಭೀತಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೇಲೆ ಆವರಿಸಿಲ್ಲ. ಮಕ್ಕಳು ಯಾವುದೇ ಒತ್ತಡಕ್ಕೆ ಸಿಲುಕಿಲ್ಲ. ನಿಗದಿಪಡಿಸಿರುವ ದಿನದಂದು ಪರೀಕ್ಷೆ ನಡೆಸುವ ಕುರಿತು ಸಚಿವರೊಂದಿಗೆ ಮಾತನಾಡಿ ನಂತರ ಅಂತಿಮ ನಿರ್ಧಾರ ತಿಳಿಸಲಾಗುವುದು ಎಂದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉಪನ್ಯಾಸಕರು ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಹೇಳಿದ್ದಾರೆ. ಇದರಿಂದ ಮಕ್ಕಳ ಭವಿಷ್ಯ ಹಾಳಾಗಬಾರದು. ಅವರ ಕೆಲ ಬೇಡಿಕೆಗಳು ಈಡೇರಿಕೆ ಹಂತದಲ್ಲಿದೆ. ಉಪನ್ಯಾಸಕರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದೂ ಅವರು ತಿಳಿಸಿದರು.