ನ್ಯೂಸ್

ಪರಿಹಾರ ಧನದ ಮೊದಲ ಕಂತು 666 ಕೋಟಿ ರೂ.ಬಿಡುಗಡೆ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಮೆಕ್ಕೆಜೋಳ ಮತ್ತು ಹೂವು ಬೆಳೆಗಾರರ 5 ಸಾವಿರ ಪರಿಹಾರ ಧನದ ಮೊದಲ ಕಂತು 666 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆನ್​ಲೈನ್ ಮೂಲಕ ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್​ ಅವರು ಸಚಿವರಾಗಿ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಅವರ ಸಾಧನೆಗಳು, ಇಲಾಖೆಯ ಪ್ರಗತಿ, ಕೊವಿಡ್​-19 ಸಂಕಷ್ಟದ ಸಂದರ್ಭದಲ್ಲಿ ತೆಗೆದುಕೊಂಡ ತೀರ್ಮಾನಗಳು ಸೇರಿ ಹಲವು ಕಾರ್ಯಕ್ರಮಗಳ ಬಗ್ಗೆ ಉಲ್ಲೇಖ ಇರುವ ' ದಿನ ನೂರು-ಸಾಧನೆ ಹಲವಾರು' ಎಂಬ ಶೀರ್ಷಿಕೆಯುಳ್ಳ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬಿಡುಗಡೆ ಮಾಡಿದರು.

ಕೃಷಿ ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮಗಳ ವಿವರ ಈ ಕಿರು ಪುಸ್ತಕದಲ್ಲಿ ಇದೆ. ನೂರು ದಿನಗಳ ಸಾಧನೆಯನ್ನು ವಿವರಿಸಲಾಗಿದೆ.