ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಒಂದು ವಾರದ ನಂತರ ಕಾಂಗ್ರೆಸ್ ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಹಾ ಶಿವರಾತ್ರಿ ಶುಭದಿನದಂದು ಬಿಡುಗಡೆ ಮಾಡಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಅಜಯ್ ಮಾಕೇನ್, ಪವನ್ ಖೇರಾ ಪಟ್ಟಿಯನ್ನು ಬಿಡುಗಡೆ ಮಾಡಿದರು. ವಯನಾಡ್ನಿಂದ ರಾಹುಲ್ ಗಾಂಧಿ ಎರಡನೇ ಬಾರಿ ಸ್ಪರ್ಧಿಸಲಿದ್ದಾರೆ. ಹಾಗೂ ಅಲೆಪ್ಪಿ ಕ್ಷೇತ್ರದಿಂದ ಕೆ.ಸಿ. ವೇಣುಗೋಪಾಲ್ ಅವರು ಸ್ಪರ್ಧಿಸಲಿದ್ದಾರೆ.
ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.
ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ: ಕರ್ನಾಟಕದ 7 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸಲಾಗಿದೆ.
ವಿಜಯಪುರ: ಎಚ್.ಆರ್.ಅಲಗೂರು
ಶಿವಮೊಗ್ಗ: ಗೀತಾ ಶಿವರಾಜ್ಕುಮಾರ್
ಹಾಸನ: ಶ್ರೇಯಸ್ ಪಾಟೀಲ್
ತುಮಕೂರು: ಎಸ್ಪಿ ಮುದ್ದಹನುಮೇಗೌಡ
ಬೆಂಗಳೂರು ಗ್ರಾಮಾಂತರ: ಡಿಕೆ ಸುರೇಶ್
ಹಾವೇರಿ: ಆನಂದ್ಸ್ವಾಮಿ ಗಡ್ಡ ದೇವರಮಠ
ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
ಈ ಪಟ್ಟಿಯಲ್ಲಿ ತೆಲಂಗಾಣದ ನಾಲ್ಕು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಜಹೀರಾಬಾದ್ ಕ್ಷೇತ್ರ- ಸುರೇಶ್ ಕುಮಾರ್ ಶೆಟ್ಕರ್, ಚೇವೆಲ್ಲಾ ಕ್ಷೇತ್ರ ಸುನೀತಾ ಮಹೇಂದರ್ ರೆಡ್ಡಿ, ನಲ್ಗೊಂಡ ಕ್ಷೇತ್ರ- ಕುಂದೂರು ರಘುವೀರ್, ಮಹಬೂಬಾಬಾದ್ ಕ್ಷೇತ್ರ (ಎಸ್‌ಟಿ )- ಪೋರಿಕ ಬಲರಾಮ್ ನಾಯಕ್ಗೆ ಟಿಕೆಟ್ ನೀಡಲಾಗಿದೆ.