ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಉಚಿತ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು.ಡಾ.ಪಿ.ವೀರಭದ್ರಪ್ಪ, ಶ್ರೀನಿವಾಸ್, ಸಂಜಯ್, ಸಿ.ಲತಾ, ಜಮೀಲ್ ಪಾಷ ಇತರರಿದ್ದರು. 
ನ್ಯೂಸ್

ಉತ್ತಮ ಆರೋಗ್ಯ ಸೇವೆ ನೀಡುವುದು ಗ್ರಾಪಂ ಗುರಿ

ಪ್ರಮುಖ ಮುಖ್ಯಾಂಶಗಳು

  • ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ
  • ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲ್ನಾಜ್ ಭಾನು ಹೇಳಿಕೆ
ಹಲಗೂರು: ಕ್ಷೇತ್ರದ ಜನರಿಗೆ ಉತ್ತಮ ಆರೋಗ್ಯ ಸೇವೆ ತಲುಪಿಸುವುದು ನಮ್ಮ ಪ್ರಧಾನ ಗುರಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲ್ನಾಜ್ ಭಾನು ತಿಳಿಸಿದ್ದಾರೆ.
ಹಲಗೂರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗಾಗಿ ಬುಧವಾರ ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಉಚಿತ ಶಿಬಿರದಲ್ಲಿ ಮಾತನಾಡಿ, ಗ್ರಾಮೀಣ ಜನರು ಈ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ ಮಾತನಾಡಿ, ಕೆಡಿಪಿ ಸಭೆಯಲ್ಲಿ ಶಾಸಕರು ನೀಡಿದ ಸೂಚನೆಯ ಮೇರೆಗೆ ತಜ್ಞ ವೈದ್ಯರೊಂದಿಗೆ ಹಲಗೂರಿನಲ್ಲಿ ಶಿಬಿರ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಬಿ.ಜಿ.ಪುರ, ಕಿರುಗಾವಲು, ಹಾಡ್ಲಿ ಮೊದಲಾದ ಹೋಬಳಿ ಕೇಂದ್ರಗಳಲ್ಲಿಯೂ ಇಂತಹ ಶಿಬಿರಗಳನ್ನು ನಡೆಸುವ ಮೂಲಕ ಜನತೆಯ ಆರೋಗ್ಯ ಕಾಪಾಡಲು ಬದ್ಧರಾಗಿದ್ದೇವೆ ಎಂದರು.
ತಾಪಂ ಇಒ ಶ್ರೀನಿವಾಸ್ ಮಾತನಾಡಿ, ಶಿಬಿರದಲ್ಲಿ ತಜ್ಞ ವೈದ್ಯರಿಂದ ಉಚಿತ ತಪಾಸಣೆ ಹಾಗೂ ಔಷಧ ವಿತರಣೆಯ ವ್ಯವಸ್ಥೆ ಮಾಡಲಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಶಿಬಿರದಲ್ಲಿ ಹೃದ್ರೋಗ ತಜ್ಞ ಡಾ.ಹೇಮಂತ್, ಪ್ರಸೂತಿ ಸ್ತ್ರೀರೋಗ ತಜ್ಞ ಡಾ. ರಚನಾ, ಡಾ. ಪ್ರಗತಿ, ಚರ್ಮರೋಗ ತಜ್ಞ ಮುಕುಂದ, ಮಕ್ಕಳ ತಜ್ಞರು ಡಾ.ಹಂಸ, ಡಾ.ಶಿಲ್ಪಶ್ರೀ, ಡಾ. ಸ್ನೇಹಾ, ಡಾ.ಸಹನಾ, ಡಾ. ರಶ್ಮಿ ಸೇರಿದಂತೆ ಹಲವಾರು ತಜ್ಞರು ಪಾಲ್ಗೊಂಡು ರೋಗಿಗಳ ತಪಾಸಣೆ ನಡೆಸಿ ಸೂಕ್ತ ಸಲಹೆ ನೀಡಿದರು.
ಶಿಬಿರದಲ್ಲಿ ಸಮಗ್ರ ತಜ್ಞ ವೈದ್ಯರ ತಂಡವು 400ಕ್ಕೂ ಹೆಚ್ಚು ಜನರಿಗೆ ತಪಾಸಣೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಸಂಜಯ್, ಜಿ.ಪಂ.ಉಪಾಧ್ಯಕ್ಷೆ ಸಿ.ಲತಾ, ಸದಸ್ಯ ಜಮೀಲ್ ಪಾಷ, ಪಿಎಚ್‌ಸಿ ವೈದ್ಯಾಧಿಕಾರಿ ಡಾ. ಸೌಮ್ಯಶ್ರೀ, ಶಿಶು ಅಭಿವೃದ್ಧಿ ಅಧಿಕಾರಿ ನಂಜಮಣಿ, ಮುಖಂಡರು ಕುಂತೂರು ಗೋಪಾಲ್, ತೇಜುಕುಮಾರ್ ಶ್ಯಾಮು, ರಾಜಣ್ಣ, ಎಂ. ಶಿವಕುಮಾರ್, ನಾಗಸಿದ್ದಯ್ಯ, ಬಾಬು, ಅಮರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.