ಹೂವಿನಹಡಗಲಿ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಭಾರತ ಕಮ್ಯುನಿಸ್ಟ್ ಪಕ್ಷದ 4ನೇ ತಾಲೂಕು ಸಮ್ಮೇಳನ ಕಾರ್ಯಕ್ರಮವನ್ನು ಸಿಪಿಐ ಜಿಲ್ಲಾ ಉಸ್ತುವಾರಿ ಎಚ್.ಎಂ.ಸಂತೋಷ ಉದ್ಘಾಟಿಸಿದರು. ಪಕ್ಷದ ಜಿಲ್ಲಾ ಕಾರ್ಯದರ್ಶಿ ವೀರಣ್ಣ, ತಾಲೂಕು ಕಾರ್ಯದರ್ಶಿ ಹಲಗಿ ಸುರೇಶ, ಎಐಟಿಯುಸಿ ತಾಲೂಕು ಅಧ್ಯಕ್ಷೆ ಬಿ.ಜಯಲಕ್ಷ್ಮೀ, ಅಕ್ಷರ ದಾಸೋಹ ಜಿಲ್ಲಾ ಅಧ್ಯಕ್ಷೆ ಎಚ್.ಅನಸೂಯಾ ಇತರರಿದ್ದರು. 
ನ್ಯೂಸ್

ಶ್ರಮಿಕರ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲ

ಹೂವಿನಹಡಗಲಿ: ಜನಪ್ರತಿನಿಧಿಗಳು ಕೂಲಿ ಕಾರ್ಮಿಕರ ಸಂಕಷ್ಟಗಳನ್ನು ನಿವಾರಿಸುವತ್ತ ಗಮನಹರಿಸುತ್ತಿಲ್ಲ ಎಂದು ಸಿಪಿಐ ಜಿಲ್ಲಾ ಉಸ್ತುವಾರಿ ಎಚ್.ಎಂ.ಸಂತೋಷ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಾರತ ಕಮ್ಯುನಿಸ್ಟ್ ಪಕ್ಷದ 4ನೇ ತಾಲೂಕು ಸಮ್ಮೇಳನದಲ್ಲಿ ಮಾತನಾಡಿದರು.

ಜನಸಾಮಾನ್ಯರ ಮತಗಳಿಂದ ಅಧಿಕಾರಕ್ಕೆ ಬರುವ ಸರ್ಕಾರಗಳು ಶ್ರಮಿಕರ ಹಿತ ಕಾಪಾಡುವಲ್ಲಿ ವಿಫಲವಾಗಿವೆ. ದೇಶದಲ್ಲಿ ನಡೆಯುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಮಹಿಳೆಯರ ಮೇಲಿನ ಶೋಷಣೆ ತಡೆಯುವಲ್ಲಿ ಮುಂದೆ ಬರುತ್ತಿಲ್ಲ. ಇದರ ವಿರುದ್ಧ ನಿರಂತರ ಹೋರಾಟ ನಡೆಸಲಿದ್ದೇವೆ ಎಂದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ವೀರಣ್ಣ ಮಾತನಾಡಿ, ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಡುವಲ್ಲಿ ವಿರೋಧ ಪಕ್ಷಗಳು ಸೋತಿವೆ ಎಂದರು.

ಸಿಪಿಐ ಕೊಟ್ಟೂರು ಕಾರ್ಯದರ್ಶಿ ಕೆ.ರೇಣುಕಮ್ಮ, ಪ್ರಮುಖರಾದ ರಮೇಶ ನಾಯ್ಕ, ಗಂಗಾಧರ, ಜಂಗ್ಲಿಸಾಬ್, ಪಿ.ಕವಿತಾ, ಡಿ.ಮುಕುಂದ ಗೌಡ, ಬಸವರಾಜ ಸಂಶಿ ಇತರರಿದ್ದರು.