ನ್ಯೂಸ್

ಸಚಿವ ಬೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಚಿತ್ರದುರ್ಗ: ನಗರಾಭಿವೃದ್ಧಿ ಸಚಿವ ಬೈರತಿ ‌ಸುರೇಶ್ ತೆರಳುತ್ತಿದ್ದ‌ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ ಮಾಡಿದೆ. ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದ ಬಳಿ ಈ ಘಟನೆ ನಡೆದಿದೆ.

ದಾರಿ ಮಧ್ಯೆ ತಾಂತ್ರಿಕ ಸಮಸ್ಯೆ ಕಾಣಿಸಿದ ಹಿನ್ನೆಲೆಯಲ್ಲಿ ಪೈಲೆಟ್‌ ಸುರಕ್ಷಿತವಾಗಿ ಹಾರನಕಟ್ಟೆ ಗ್ರಾಮದಲ್ಲಿ ಸೇಫ್ ಲ್ಯಾಂಡಿಂಗ್ ಮಾಡಿದ್ದಾರೆ. ಅಪಾಯದಿಂದ ಪಾರಾದ ಬೈರತಿ ಸುರೇಶ್‌ ಅವರು ರಸ್ತೆ ಮಾರ್ಗವಾಗಿ ಗದಗಕ್ಕೆ ತೆರಳಿದ್ದಾರೆ. ಈ ವಿಷಯ ತಿಳಿದ ಹಿರಿಯೂರು‌ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ‌ ಭೇಟಿ‌ ನೀಡಿ ‌ಪರಿಶೀಲನೆ ನಡೆಸಿದರು.

ಗದಗದ ಲಕ್ಷ್ಮೇಶ್ವರದ ರಾಮಗಿರಿಯಲ್ಲಿ ಆಯೋಜನೆಗೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಳಗ್ಗೆ ಬೆಂಗಳೂರಿನ ಜಕ್ಕೂರು ಏರೋಡ್ರಂನಿಂದ ಸುರೇಶ್‌ ಅವರಿದ್ದ ಹೆಲಿಕಾಪ್ಟರ್‌ ಟೇಕಾಫ್‌ ಆಗಿತ್ತು ಎನ್ನಲಾಗಿದೆ.