ಶಿಕಾರಿಪುರ: ವಿರಕ್ತಮಠ, ವೀರಶೈವ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಕದಳಿ ವೇದಿಕೆ, ಜನಪದ ಕಲಾವಿದರ ಸಂಘ ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ತಿಕ ಮಾಸದ ಸುಜ್ಞಾನದ ಬೆಳಕು ಕಾರ್ಯಕ್ರಮದ ಸಮಾರೋಪ ತಾಳಗುಂದದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಡಿ.1ರ ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ವಿರಕ್ತ ಮಠದ ಶ್ರೀ ಚನ್ನಬಸವ ಸ್ವಾಮೀಜಿ ಹೇಳಿದರು. ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಬಸವಾಶ್ರಮದ ಮಾತೆ ಶರಣಾಂಬಿಕೆ, ಪುಟ್ಟರಾಜ ಸ್ವಾಮೀಜಿ, ಶಾಸಕ ಬಿ.ವೈ.ವಿಜಯೇಂದ್ರ, ತಾಳಗುಂದ ಗ್ರಾಪಂ ಅಧ್ಯಕ್ಷೆ ಚನ್ನಮ್ಮ ಷಣ್ಮುಖಪ್ಪ ಮತ್ತಿತರರು ಪಾಲ್ಗೊಳ್ಳುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಪ್ಯಾಟಿ ಈರಣ್ಣ, ಸುಭಾಶ್ಚಂದ್ರ ಸ್ಥಾನಿಕ್, ಸಾಲೂರು ಕುಮಾರ್, ರೈತ ಮುಖಂಡ ಪ್ರಸನ್ನ ಸುದ್ದಿಗೋಷ್ಠಿಯಲ್ಲಿದ್ದರು.