ಪೊಲೀಸರ ವಶಕ್ಕೆ 
ನ್ಯೂಸ್

ತಪ್ಪಿಸಿಕೊಂಡು ಓಡಲು ಯತ್ನಿಸಿದ ಕೊಲೆ ಆರೋಪಿ ಸೆರೆ

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್‌ಗೆ ಕೊಲೆ ಆರೋಪಿಯನ್ನು ಕರೆದುಕೊಂಡು ಬಂದಿದ್ದಾಗ ಪರಾರಿಯಾಗಲು ಯತ್ನಿಸಿದ್ದು ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ.
ಸುದ್ದುಗೊಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮನೋಜ್ ಜೀಪ್ ಇಳಿಯುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದ. ಬಳಿಕ ಬೆನ್ನಟ್ಟಿದ್ದ ಪೊಲೀಸರು ಕೋರ್ಟ್ ಗೇಟ್ ಬಳಿ ಹಿಡಿದಿದ್ದಾರೆ. ಆರೋಪಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ಜೈಲಿಗೆ ಕಳುಹಿಸುತ್ತಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ. ಈತನನ್ನು ಹುಳಿಮಾವು ಮತ್ತು ರಾಜಾಜಿನಗರ ಪೊಲೀಸರು ಕಸ್ಟಡಿಗೆ ಪಡೆದುಕೊಂಡು ಹೋಗಲು ಕೋರ್ಟ್‌ಗೆ ಬಂದಿದ್ದರು. ಸದ್ಯ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.