ನ್ಯೂಸ್

ಕರ್ನಾಟಕದಲ್ಲಿ 175ಕ್ಕೆ ಏರಿದ ಕರೊನಾ ಸೋಂಕಿತರ ಸಂಖ್ಯೆ; 25 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್​

ಬೆಂಗಳೂರು: ಕರ್ನಾಟಕದಲ್ಲಿ ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ ಒಟ್ಟು 12 ಹೊಸ ಕರೊನಾ ಸೋಂಕಿತರು ಪತ್ತೆಯಾಗಿದ್ದು, ಸದ್ಯ ಸೋಂಕಿತರ ಸಂಖ್ಯೆ 175ಕ್ಕೆ ಏರಿದೆ.

ಬಾಗಲಕೋಟೆ, ಕಲಬುರ್ಗಿಯಲ್ಲಿ ತಲಾ 2, ಗದಗದಲ್ಲಿ 1, ಬೆಂಗಳೂರು ನಗರದಲ್ಲಿ 3, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1, ಮಂಡ್ಯದಲ್ಲಿ 3 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿಯವರೆಗೆ 25 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇಂದು ನಡೆಯುತ್ತಿರುವ ‘ವಿಶ್ವ ಆರೋಗ್ಯ ದಿನಾಚರಣೆ’ಯನ್ನು ಕರೊನಾ ವೈರಸ್‌ ಪೀಡಿತರ ಸೇವೆಯಲ್ಲಿ ತೊಡಗಿಕೊಂಡಿರುವ ಶುಶ್ರೂಷಕಿಯರು ಮತ್ತು ದಾದಿಯರಿಗೆ ಮೀಸಲಿಡಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ.

ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.

ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.