ನ್ಯೂಸ್

ಆನ್‌ಲೈನ್ ಬೆಟ್ಟಿಂಗ್ ಗೇಮ್: ಕಡಿವಾಣಕ್ಕೆ ನಿರಂತರ ಪ್ರಯತ್ನ|The Online Betting Game: A Constant Quest for Curtailment

ಬೆಳಗಾವಿ: ಆನ್‌ಲೈನ್(Online) ಬೆಟ್ಟಿಂಗ್ ಗೇಮ್ ಸಂಸ್ಥೆಗಳ ಕಡಿವಾಣಕ್ಕೆ ಸರ್ಕಾರ ನಿರಂತರ ಪ್ರಯತ್ನ ನಡೆಸಿದೆ(The Online Betting Game: A Constant Quest for Curtailment) ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ(G Parameswar) ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸೋಮಶೇಖರ್ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

ಆನ್‌ಲೈನ್ ಬೆಟ್ಟಿಂಗ್ ಗೇಮ್ ಸಂಸ್ಥೆಗಳ ನಿರ್ಬಂಧಕ್ಕೆ ರಾಜ್ಯ ಉಚ್ಚನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ. ನ್ಯಾಯಾಲಯ ತಡೆಯಾಜ್ಞೆ ಇದೆ ಎಂದು ಸರ್ಕಾರ ಸುಮ್ಮನೆ ಕೂತಿಲ್ಲ. ಕಾನೂನು ಪ್ರಕಾರ ನಿರಂತರವಾಗಿ ಆನ್‌ಲೈನ್ ಬೆಟ್ಟಿಂಗ್ ಗೇಮ್ ಕಡಿವಾಣಕ್ಕೆ ಪ್ರಯತ್ನ ಮಾಡುತ್ತಿದೆ ಎಂದರು.

ಹೆಚ್ಚಿನ ಪ್ರಮಾಣದಲ್ಲಿ ಯುವ ಪೀಳಿಗೆ ಆನ್‌ಲೈನ್‌ಅನ್ ಗೇಮ್‌ಗಳ ವ್ಯಸನಕ್ಕೆ ತುತ್ತಾಗುತ್ತಿದ್ದರೆ. ಇದು ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಇದರ ತಡೆಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿ ಮಾಡಬೇಕಿದೆ. ಬೆಂಗಳೂರು ನಗರದಲ್ಲಿ 5 ಹಾಗೂ ವಿಜಯನಗರದಲ್ಲಿ ಒಬ್ಬರು ಆನ್‌ಲೈನ್ ಬೆಟ್ಟಿಂಗ್ ಆಟದ ದಂಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಪ್ಟೆವೇರ್ ಉದ್ಯೋಗಿಗಳು ಇದರ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಿ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದರು.