ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಫೆ.21ರ ಸಂಜೆ 6.45ಕ್ಕೆ ಮೈಸೂರಿನ ಸಂಕಲ್ಪ ತಂಡದ ಕಲಾವಿದರು ‘ಜತೆಗಿರುವನು ಚಂದಿರ’ ನಾಟಕ ಪ್ರಸ್ತುತಪಡಿಸಲಿದ್ದಾರೆ ಎಂದು ನಮ್ ಟೀಮ್‌ನ ಹೊನ್ನಾಳಿ ಚಂದ್ರಶೇಖರ್ ತಿಳಿಸಿದರು.
ನಮ್‌ಟೀಮ್ ರಂಗತಂಡ ಹಾಗೂ ಶಿವಮೊಗ್ಗ ರಂಗಾಯಣದ ಆಶ್ರಯದಲ್ಲಿ ನಾಟಕ ಆಯೋಜಿಸಲಾಗಿದೆ. ಅದೇ ದಿನ ಬೆಳಗ್ಗೆ 10ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ರಂಗ ನಿರ್ದೇಶಕ ಹುಲುಗಪ್ಪ ಕಟ್ಟೀಮನಿ ಅವರೊಂದಿಗೆ ಸಂವಾದ ಏರ್ಪಡಿಸಲಾಗಿದೆ. ರಂಗಾಯಣದ ನಿರ್ದೇಶಕ ಪ್ರಸನ್ನ ಡಿ. ಸಾಗರ ಪಾಲ್ಗೊಳ್ಳುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜತೆಗಿರುವನು ಚಂದಿರ ನಾಟಕವನ್ನು ಜಯಂತ್ ಕಾಯ್ಕಿಣಿ ಕನ್ನಡಕ್ಕೆ ರೂಪಾಂತರ ಮಾಡಿದ್ದಾರೆ. ಹುಲುಗಪ್ಪ ಕಟ್ಟಿಮನಿ ನಿರ್ದೇಶಿಸಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ನಟ ರಂಗಾಯಣ ರಘು ಅವರ ಪತ್ನಿ ಮಂಗಳಾ ಸೇರಿ 27 ಕಲಾವಿದರ ತಂಡ ಪ್ರಸ್ತುತಪಡಿಸಲಿದೆ. ಮಾಹಿತಿಗೆ ಮೊ: 9844518866 ಸಂಪರ್ಕಿಸಬಹುದು ಎಂದರು. ರಂಗಕರ್ಮಿಗಳಾದ ವೈದ್ಯನಾಥ್, ವಿಜಯ್ ನೀನಾಸಂ ಸುದ್ದಿಗೋಷ್ಠಿಯಲ್ಲಿದ್ದರು.