Yediyurappa  
ನ್ಯೂಸ್

ಪಾದರಾಯನಪುರ ಗಲಭೆಕೋರರ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಸಿಎಂ; ಕರ್ತವ್ಯಕ್ಕೆ ಅಡ್ಡಿಪಡಿಸಿದ್ರೆ ಫುಲ್​ ಪವರ್​ ತೋರಿಸಿ ಎಂದು ಸೂಚನೆ

ಬೆಂಗಳೂರು: ಪಾದರಾಯನಪುರ ಗಲಭೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಮೃದು ಧೋರಣೆ ತೋರುವ ಪ್ರಶ್ನೆಯೇ ಇಲ್ಲ ಎಂದು ಖಡಕ್​ ಟ್ವೀಟ್ ಮಾಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡುತ್ತ ಶಾಸಕ ಜಮೀರ್ ಅಹ್ಮದ್​ ವಿರುದ್ಧ ಕಿಡಿಕಾರಿದ್ದ ಸಿಎಂ ಯಡಿಯೂರಪ್ಪ ಇದೀಗ ಟ್ವೀಟ್ ಮಾಡುವ ಮೂಲಕವೂ ಗುಂಡಾವರ್ತನೆಯನ್ನು ಖಂಡಿಸಿದ್ದಾರೆ. ಹಾಗೇ ಪಾದರಾಯನಪುರ ಗಲಭೆಕೋರರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡುವುದಾಗಿ ತಿಳಿಸಿದ್ದಾರೆ.

ಪಾದರಾಯನಪುರದಲ್ಲಿ ಗೂಂಡಾವರ್ತನೆ ತೋರಿಸಿದವರ ವಿರುದ್ಧ ಮೃದು ಧೋರಣೆ ತೋರಿಸಲು ಸಾಧ್ಯವೇ ಇಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸರ್ವ ಸ್ವತಂತ್ರರು. ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುವವರಿಂದ ಪ್ರಾಣ ರಕ್ಷಣೆ ಮಾಡಿಕೊಳ್ಳಲು ಪೊಲೀಸರು ಲಭ್ಯವಿರುವ ಎಲ್ಲ ರೀತಿಯ ಬಲಪ್ರಯೋಗ ಮಾಡಬಹುದು. ಅವರಿಗೆ ಮುಕ್ತ ಅವಕಾಶ ಇದೆ ಎಂದು ಟ್ವಿಟರ್​ನಲ್ಲಿ ಸಿಎಂ ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್​)