ನ್ಯೂಸ್

ಬೈಕ್ ನಿಯಂತ್ರಣ ತಪ್ಪಿ ಬಿದ್ದು ಟೆಕ್ಕಿ ಸಾವು

ಬೆಂಗಳೂರು: ನಿಯಂತ್ರಣ ತಪ್ಪಿ ರಸ್ತೆ ವಿಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಪ್ರಕರಣ ವೈಟ್‌ಫೀಲ್ಡ್ ಬಳಿಯ ರಾಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಚಂದ್ರಶೇಖರ್ (೨೪) ಸ್‌ಟಾವೇರ್ ಇಂಜಿನಿಯರ್ ಮೃತಪಟ್ಟವರು.
ಆಂಧ್ರಪ್ರದೇಶ ಮೂಲದ ಚಂದ್ರಶೇಖರ್, ನಗರದ ಮುನೇಕೊಳಲು ಬಡಾವಣೆಯಲ್ಲಿನ ತನ್ನ ಅಕ್ಕನ ಮನೆಗೆ ಬಂದಿದ್ದರು. ಅವರು ಸ್ನೇಹಿತನ ಬೈಕ್ ತೆಗೆದುಕೊಂಡು ಅಕ್ಕನ ಮನೆಗೆ ಹೋಗುತ್ತಿದ್ದಾಗ ಮಧ್ಯರಾತ್ರಿ ೨.೩೦ ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಅಜಾಗರೂತೆಯಿಂದ ತುಂಬಾ ವೇಗವಾಗಿ ಬೈಕ್ ಚಾಲನೆ ಮಾಡುತ್ತಿದ್ದ ಚಂದ್ರಶೇಖರ್, ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ವಾಹನ ಗುದ್ದಿಸಿದ್ದಾರೆ. ಆಗ ಬೈಕ್‌ನಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸಂದರ್ಭದಲ್ಲಿ ಚಂದ್ರಶೇಖರ್ ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ, ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೈಟ್‌ಫೀಲ್ಡ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.